ಹಾನಗಲ್ :
ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸುಮಾರು 10 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿರುವ ಘಟನೆ ಸಮೀಪದ ಬಾಳಂಬೀಡದಲ್ಲಿ ನಡೆದಿದ್ದು, ಸಂತ್ರಸ್ಥ ಗ್ರಾಮಸ್ಥರನ್ನು ಕಾಂಗ್ರೆಸ್ ಜನಪ್ರತಿನಿಧಿಗಳು ಹಾಗೂ ಮುಖಂಡನ್ನೊಳಗೊಂಡ ನಿಯೋಗ ಭೇಟಿ ಮಾಡಿತು.
ನೀರು ನುಗ್ಗಿ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಸಂತ್ರಸ್ಥ ಗ್ರಾಮಸ್ಥರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲು ಇದೇ ಸಂದರ್ಭದಲ್ಲಿ ಗ್ರಾಪಂ ಹಾಗೂ ತಾಲೂಕಾಡಳಿತಕ್ಕೆ ಮನವಿ ಮಾಡಲಾಯಿತು.
ತೆಲಂಗಾಣ ಪ್ರವಾಸದಲ್ಲಿರುವ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ದೂರವಾಣಿ ಮೂಲಕ ತಹಶೀಲ್ದಾರ್ ಸಿ.ಎಸ್.ಭಂಗಿ ಅವರೊಂದಿಗೆ ಮಾತನಾಡಿ ಅಗತ್ಯ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.
ಜಿಪಂ ಸದಸ್ಯರಾದ ಟಾಕನಗೌಡ ಪಾಟೀಲ, ಗೌರಮ್ಮ ಶೇತಸನದಿ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಸದಸ್ಯೆ ಶಕುಂತಲಾ ತಳವಾರ, ಗ್ರಾಪಂ ಅಧ್ಯಕ್ಷ ಪ್ರಕಾಶ ದುಂಡಣ್ಣನವರ, ಸದಸ್ಯ ದೇವರಾಜ್ ಹರಿಜನ, ಮುಖಂಡರಾದ ಯಾಸೀರ್‍ಖಾನ್ ಪಠಾಣ, ರಾಜೂ ಗುಡಿ, ಬಸವರಾಜ್ ಹಾದಿಮನಿ ಸೇರಿದಂತೆ ಹಲವರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ