ಬೆಂಗಳೂರು:

ಕೆ.ಆರ್. ಮಾರ್ಕೆಟ್ ಸುತ್ತಮುತ್ತ ಇರುವ ನಿಯಮಬಾಹಿರವಾದ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೆ ಕೈಕಟ್ಟಿ ಕುಳಿತ್ತಿದ್ದ ಬಿಬಿಎಂಪಿ ಆಯುಕ್ತರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ ಧಾರವಾಡದಲ್ಲಿ ಇತ್ತೀಚೆಗೆ ಸಂಭವಿಸಿದ ಕಟ್ಟಡ ಕುಸಿತದಂತಹ ಅವಘಡಗಳೇನಾದರೂ ನಡೆದಲ್ಲಿ, ಆಯುಕ್ತರು ಮತ್ತಿತರರ ಅಧಿಕಾರಿಗಳನ್ನು ಪ್ರಮುಖ ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಹೈಕೋರ್ಟ್ ಆದೇಶದಂತೆ ಬುಧವಾರ ವಿಚಾರಣೆಗೆ ಹಾಜರಾಗಿದ್ದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಮಾರುಕಟ್ಟೆಯ ಕಟ್ಟಡಗಳಿಗೆ ಅಗ್ನಿ ಶಾಮಕ ದಳದಿಂದ ನಿರಾಕ್ಷೇಪಣಾ ಪತ್ರ ಪಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಮಾ.6ರಂದು ಟೆಂಡರ್ ಕರೆಯಲಾಗಿದೆಯಾದರೂ, ಚುನಾವಣಾ ನೀತಿ ಸಂಹಿತೆ ಕಾರಣ ಅದನ್ನು ಮುಂದುವರಿಸಿಲ್ಲ ಎಂದು ವಿವರಿಸಿದರು.
ಈ ಉತ್ತರದಿಂದ ಸಮಾಧಾನಗೊಳ್ಳದ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಎಲ್ಲ ಕಟ್ಟಡಗಳಿಗೆ ನಿರಾಕ್ಷೇಪಣಾ ಪತ್ರ ಪಡೆದ ನಂತರವಷ್ಟೇ ಅವುಗಳು ಕಾರ್ಯನಿರ್ವಹಿಸಲು ಅನುಮತಿ ದೊರೆಯುತ್ತದೆ. ಅಲ್ಲಿಯವರೆಗೆ ಅದನ್ನು ಸ್ಥಗಿತಗೊಳಿಸಿ ಎಂದು ಮೌಖಿಕವಾಗಿ ತಾಕೀತು ಮಾಡಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
