ಬೆಂಗಳೂರು:
ಕರ್ನಾಟಕ ಲೋಕೋಪಯೋಗಿ ಇಲಾಖೆ ಇತ್ತೀಚಿನ ದಿನಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು ರಾಜ್ಯದಲ್ಲಿರುವ ಪ್ರಮುಖ ರಸ್ತೆಗಳ ಅಭಿವೃಧಿಗೆ ಗಮನಕೊಟ್ಟಂತೆ ಕಾಣುತ್ತದೆ.
ಹಲವು ಸುತ್ತಿನ ಸಮಾಲೋಚನೆ ಮೂಲಕ ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ನೆಲ್ಲಿಯಡಿ ಜಂಕ್ಷನ್ ವರೆಗೂ ಚಿತ್ರದುರ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 173 ಅಂತರ ಕಾರಿಡಾರ್ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.
ಸುಮಾರು 2, 500 ಕೋಟಿ ರೂ. ಮೊತ್ತದ ಈ ಯೋಜನೆಯಿಂದ ದೇಶದ ಪ್ರಮುಖ ನಗರಗಳನ್ನು ಸಂಪರ್ಕಕಕ್ಕೆ ಅನುಕೂಲವಾಗಲಿದ್ದು, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಮುಂದಿನ ತಿಂಗಳು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಧ್ಯಮದವರಿಗೆ ಇಲಾಖೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








