ಲಾಕ್ ಡೌನ್ ಸಡಿಲಿಕೆ : ಸರ್ಕಾರದ ಕ್ರಮವನ್ನು ಟೀಕಿಸಿದ ಹೆಚ್ ಕೆ ಪಾಟೀಲ್…!

ಬೆಂಗಳೂರು:

      ಲಾಕ್ ಡೌನ್ ಸಡಿಲಿಕೆಯಂತಹ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವರ ಪರವಾಗುವುದೇ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ. ತಕ್ಷಣ ಲಾಕ್ ಡೌನ್ ಸಡಿಲಿಕೆಯಂತಹ ದುರಂತವನ್ನು ಆಹ್ವಾನಿಸುವ ನಿರ್ಣಯವನ್ನು ಕೈಬಿಡಬೇಕೆಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ.

      ಹಳಿತಪ್ಪಿರುವ  ಆರ್ಥಿಕ  ವಸ್ಥೆಯನ್ನು ಮರಳಿ ಅಭಿವೃದ್ಧಿಪಥದತ್ತ ಚಲಿಸುವಂತೆ ಮಾಡಲು ಕೇವಲ ಲಾಕ್ ಡೌನ್ ಸಡಿಲಿಕೆ ಉಪಾಯವಾಗುವುದಿಲ್ಲ. ಅದಕ್ಕೆ ಸಮಗ್ರವಾದ ಆರ್ಥಿಕ ಚೈತನ್ಯ ತುಂಬುವ ಭ್ರಷ್ಟಾಚಾರ ಮುಕ್ತ, ಪ್ರಾಮಾಣಿಕ, ನೈತಿಕ ಮನಸ್ಥಿತಿಯ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಜನತೆ ತಮ್ಮ ತಮ್ಮ ಉದ್ಯೋಗಗಳಲ್ಲಿ ಮರಳಿ ತೊಡಗಿ, ಎಂದಿನಂತೆ ತಮ್ಮ ಆದಾಯವನ್ನು ಕ್ರೋಢೀಕರಿಸಿಕೊಳ್ಳುವುದು ಕೇವಲ ಈ ಸಡಿಲಿಕೆಯಿಂದ ಸಾಧ್ಯವಾಗುವುದಿಲ್ಲ ಎಂದು ಎಚ್.ಕೆ.ಪಾಟೀಲ್ ತಮ್ಮ ವಿವರವಾದ ಪತ್ರದಲ್ಲಿ ಕಟುವಾದ ಶಬ್ದಗಳಿಂದ ಟೀಕಿಸಿದ್ದಾರೆ.

     ”ರಾಷ್ಟ್ರದ ಇತರೆಡೆ ಮತ್ತು ಪ್ರಪಂಚದ ಬೇರೆ ಬೇರೆ ಕಡೆ ಲಾಕ್ ಡೌನ್ ಇರುವುದರಿಂದ ನಮ್ಮ ಈ ಸಣ್ಣ ಕ್ರಮದಿಂದ ಆರ್ಥಿಕತೆಗೆ ಚೈತನ್ಯ ಸಿಗುತ್ತದೆ ಎಂಬುದು ಒಂದು ಸುಳ್ಳು ಸಮರ್ಥನೆಯಾದೀತು. ಬಿಡಿಎ ಸೈಟ್ ಗಳನ್ನು ಹರಾಜು ಮಾಡುವ ಮೂಲಕ, ಅಕ್ರಮ-ಸಕ್ರಮಗಳನ್ನು ಘೋಷಿಸುವ ಮೂಲಕ ಮತ್ತು ರಿಯಲ್ ಎಸ್ಟೇಟ್ ಚಟುವಟಿಕೆಗೆ ಅವಕಾಶ ನೀಡುವ ಮೂಲಕ ಸರ್ಕಾರಕ್ಕೆ, ಸಂಪನ್ಮೂಲ ಕ್ರೋಢೀಕರಣಕ್ಕೆ ತಾವು ಮುಂದಾಗಿದ್ದೀರಿ ಎಂದು ಪತ್ರಿಕೆಗಳಲ್ಲಿ ಓದಿದೆ.

       ಇಂತಹ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು, ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವನಪರ ವಾಗುವುದೇ ಇಲ್ಲ. ನೀವು ಆರ್ಥಿಕ ಚೈತನ್ಯ ತುಂಬಬೇಕಾಗಿರುವುದು ಗಣಿಧಣಿಗಳಿಗಲ್ಲ, ರಿಯಲ್ ಎಸ್ಟೇಟ್ ಮಧ್ಯವರ್ತಿ ವ್ಯಾಪಾರಿಗಳಲ್ಲ, ರಾಜಕಾರಣಿಗಳು ಹೊಂದಿರುವ ಕಟ್ಟಡ ಸಂಕೀರ್ಣಗಳ ಬಾಡಿಗೆ ಬರಬೇಕೆಂಬ ಉದ್ದೇಶದಿಂದ ಐಟಿ-ಬಿಟಿ ಕಂಪನಿಗಳಿಗೆ ಲಾಕ್ ಡೌನ್ ಸಡಿಲಗೊಳಿಸುವ ನಿರ್ಧಾರ ಮೇಲ್ಮಧ್ಯಮ ವರ್ಗದವರಿಗೆ ಮತ್ತು ಸಿರಿವಂತರಿಗೆ ಮಾತ್ರ ಸಹಾಯವಾದೀತು. ಇಂತಹ ನಿರ್ಣಯಗಳಿಂದ ಇತಿಹಾಸದ ಪುಟದಲ್ಲಿ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ” ಎಂದು ಎಚ್ಚರಿಸಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap