ಬೆಂಗಳೂರು
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಿಕ್ಷಕರಿಗೆ ಮಾ.31ರ ವರೆಗೆ ರಜೆ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಚಿವರು,ರಾಜ್ಯದ ಎಲ್ಲಾ ಸರಕಾರಿ/ಅನುದಾನಿತ/ಅನುದಾನರಹಿತ ಶಾಲಾ ಶಿಕ್ಷಕರಿಗೆ ಮತ್ತು ಶಿಕ್ಷಕೇತರ ಸಿಬ್ಬಂದಿಗೆ 31.03.2020 ರವರೆಗೆ ರಜೆ ಘೋಷಿಸಲಾಗಿದ್ದು ಅವರಿಗೆ ಕೊಟ್ಟಿರುವ ಶೈಕ್ಷಣಿಕ ಕಾರ್ಯಗಳನ್ನು ಅವರವರ ಮನೆಗಳಿಂದಲೇ ನಿರ್ವಹಿಸುವುದಕ್ಕೆ ಸೂಚನೆ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ