ಸಾಧಕ ಮಹಿಳೆಯರಿಗೆ ಸನ್ಮಾನ

ಮಧುಗಿರಿ:

       ಕುಟುಂಬದ ನಿರ್ವಹಣೆಯೊಂದಿಗೆ ಖರ್ಚು ವೆಚ್ಚಗಳನ್ನು ಸರಿದೂಗಿಸುವ ಮಹಿಳೆ ಯಾವ ಅಧಿಕಾರಿ ರಾಜಕಾರಣಿಗಳು ಕಡಿಮೆಯಿಲ್ಲಾ ಎಂದು ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮುರಳಿಧರ್‍ಹಾಲಪ್ಪ ತಿಳಿಸಿದರು.

        ಪಟ್ಟಣದ ಕುಂಚಿಟಿಗ ವಕ್ಕಲಿಗರ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀ ಮಹಿಳಾ ಚಾರಿಟಬಲ್ ಟ್ರಸ್ಟ್‍ನ ಉದ್ಘಾಟನೆ ಹಾಗೂ ಮಹಿಳಾ ಸಾಧಕಿಯರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಯಂದಿರು ಮಕ್ಕಳಿಗೆ ಉತ್ತಮ ಶಿಕ್ಷಣಕೊಡಿಸಿ ವಿದ್ಯಾವಂತರನ್ನಾಗಿಸಿ. ಟ್ರಸ್ಟ್ ವತಿಯಿಂದ ವೃದ್ದಾಶ್ರಮ ಸ್ಥಾಪಿಸಲು ಸರ್ಕಾರದಿಂದ ಎಲ್ಲಾ ರೀತಿಯ ನೆರವು ಕೊಡಿಸುವುದಾಗಿ ತಿಳಿಸಿದರು. ಹಾಲಪ್ಪ ಪ್ರತಿಷ್ಠಾನದ ವತಿಯಿಂದ 25 ಸಾವಿರ ರೂ ನೀಡುವುದಾಗಿ ಭರವಸೆ ನೀಡಿದರು.

         ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಸಂಘದ ಪದಾಧಿಕಾರಿಗಳು ಭಿನ್ನಾಭಿಪ್ರಾಯ ಬದಿಗಿಟ್ಟು ಒಟ್ಟಿನಿಂದ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಸಂಘ ಉದಯೋನ್ಮುಖವಾಗಿ ಬೆಳೆಯಲು ಸಹಕಾರಿಯಾಗುತ್ತದೆ ಸಂಘ ಸಂಸ್ಥೆಗಳನ್ನು ಕೇವಲ ಪ್ರಚಾರಕ್ಕಾಗಿ, ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ ಬಡವರ ನಿರ್ಗತಿಕರ ಸೇವೆ ಮಾಡುವ ಸಮಾಜ ಬೆಳೆಸಬೇಕಾಗಿದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಪರವಾಗಿ ಸಮುದಾಯದ ಮಹಿಳೆಯರು ಪ್ರಚಾರ ನಡೆಸಿ ನನ್ನ ಗೆಲುವಿಗೆ ಕಾರಣಕರ್ತರಾಗಿದ್ದು, ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದ ಅಭಿವೃಧ್ದಿ ಕಾರ್ಯಗಳನ್ನು ಮಾಡುತ್ತೇನೆ ಎಂದರು.

        ಸಣ್ಣ ಕೈಗಾರಿಕೆಗಳ ಸಚಿವ ಎಸ್.ಆರ್.ಶ್ರೀನಿವಾಸ್ ಪತ್ನಿ ಭಾರತಿ ಟ್ರಸ್ಟ್‍ನ ಗೌರವಾಧ್ಯಕ್ಷೆ ಸಾವಿತ್ರಮ್ಮ ಆರ್.ಶಂಕರಯ್ಯ, ಪಾರ್ವತಮ್ಮ. ಮುಖಂಡ ತುಂಗೋಟಿ ರಾಮಣ್ಣ, ಪುರಸಭೆ ಸದಸ್ಯ ಎಂ.ಎಲ್.ಗಂಗರಾಜು, ಡಾ.ಎನ್.ಎಚ್.ಹಾಲಪ್ಪ, ಕೆ.ಗೋವಿಂದರೆಡ್ಡಿ, ಟ್ರಸ್ಟ್‍ನ ಪದಾಧಿಕಾರಿಗಳಾದ ಭಾರತಿ, ರಾಗಿಣಿ, ಲಕ್ಷ್ಮಮ್ಮ ಕೀರ್ತಿಶ್ರೀ ಮುಂತಾದವರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link