ಚಳ್ಳಕೆರೆ
ಕಳೆದ ಹಲವಾರು ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಮೂಲಕ ಖ್ಯಾತಿಯಾದ ಹಟ್ಟಿಚಿನ್ನದ ಗಣಿ ನಿಗಮದ ಅಧ್ಯಕ್ಷರು, ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಸಹಕಾರಿ ಕ್ಷೇತ್ರದಲ್ಲೂ ಸಹ ಪರ್ದಾಪಣೆ ಮಾಡಿ ಮೊದಲ ಪ್ರಯತ್ನದಲ್ಲೇ ಜಿಲ್ಲಾ ಡಿಸಿಸಿ ಬ್ಯಾಂಕ್‍ನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಹಕಾರಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಕಾರಣಕರ್ತರಾಗಿದ್ದು, ಅವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ಅಭಿನಂದಿಸುವುದಾಗಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಅವರು, ಗುರುವಾರ ಇಲ್ಲಿನ ಶಾಸಕರ ಖಾಸಗಿ ನಿವಾಸದಲ್ಲಿ ಮಂಗಳವಾರವಷ್ಟೇ ಜಿಲ್ಲಾ ಡಿಸಿಸಿ ಬ್ಯಾಂಕ್‍ನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಶಾಸಕರನ್ನು ಪಕ್ಷದ ಪರವಾಗಿ ಸನ್ಮಾನಿಸಿ ಮಾತನಾಡಿದರು. ಶಾಸಕ ಟಿ.ರಘುಮೂರ್ತಿ ನಿರಂತರ ರಾಜಕೀಯ ಚಟುವಟಿಕೆಗಳ ನಡುವೆಯೂ ಸಹಕಾರಿ ಕ್ಷೇತ್ರದ ಉನ್ನತ್ತಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಇವರನ್ನು ಬೆಂಬಲಿಸಿ ಉಳಿದ ಎಲ್ಲಾ ನಾಲ್ಕು ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ವಾಪಾಸ್ ಪಡೆದ ಹಿನ್ನೆಲೆಯಲ್ಲಿ ಟಿ.ರಘುಮೂರ್ತಿಯವರ ಅವಿರೋಧ ಆಯ್ಕೆಗೆ ನಾಂದಿಯಾಯಿತು. ಸಹಕಾರಿ ಕ್ಷೇತ್ರದಲ್ಲೂ ಸಹ ಟಿ.ರಘುಮೂರ್ತಿಯವರು ಮತ್ತಷ್ಟು ದಾಖಲೆಗಳನ್ನು ನಿರ್ಮಿಸುವಂತಹ ಕಾರ್ಯವನ್ನು ಮಾಡಲೇಂದು ಪಿ.ತಿಪ್ಪೇಸ್ವಾಮಿ ಶುಭ ಹಾರೈಸಿದ್ಧಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ಟಿ.ಶ್ರೀನಿವಾಸ್, ಪುರಸಭೆ ಮಾಜಿ ಸದಸ್ಯ ಡಿ.ಕೆ.ಕಾಟಪ್ಪ ಮುಂತಾದವರು ಉಪಸ್ಥಿತರಿದ್ದರು.