ಅಭಿನಂದನೆ ಸಲ್ಲಿಸಿದ ಅಲೆಮಾರಿ ಸಮುದಾಯಗಳ ಮುಖಂಡರು

ಬಳ್ಳಾರಿ

           ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಅನುಷ್ಠಾನ ಸಮಿತಿಯ ಸಭೆಯಲ್ಲಿ ನಿರ್ಧರಿಸಿದಂತೆ ಜಿಲ್ಲಾಧಿಕಾರಿಗಳು ಲಾಟರಿ ಮೂಲಕ ಅರ್ಹ ಫಲಾನುಭವಿಗಳಿಗೆ ಆಯ್ಕೆ ಮಾಡಿರುವುದನ್ನು ಸ್ವಾಗತಿಸಿರುವ ಗುಡಾರ ಗುಡಿಸಲು ನಿವಾಸಿಗಳ ಕಲ್ಯಾಣ ಸಂಘ ಅಭಿನಂದಿಸಿದೆ.

        ಈ ಕುರಿತು ಸಂಘದ ಜಿಲ್ಲಾಧ್ಯಕ್ಷ ಸಣ್ಣ ಮಾರೆಪ್ಪ, ತಾ.ಪಂ.ಸದಸ್ಯ ಸಿಡಿ ಮಹದೇವ, ಕೋಶಾಧ್ಯಕ್ಷ ಗಿರೀಶ್, ಜಂಬಣ್ಣ, ಅನುಷ್ಠಾನ ಸಮಿತಿ ಸದಸ್ಯ ಕೆ.ರಾಮು, ಹೊನ್ನೂರಪ್ಪ, ಅಡಿವೆಪ್ಪ ಮತ್ತು ಎಲ್ಲ ಪದಾಧಿಕಾರಿಗಳು ಈ ಕುರಿತು ಪ್ರಕಟಣೆ ನೀಡಿದ್ದು, ಶೇ 28ರ ಪ್ರಕಾರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಪೈಕಿ ಹಡಗಲಿ-21, ಸಿರುಗುಪ್ಪ-29, ಹಗರಿಬೊಮ್ಮನಹಳ್ಳಿ-47, ಬಳ್ಳಾರಿ ನಗರ ಮತ್ತು ಗ್ರಾಮಾಂತರ-100,. ಹೊಸಪೇಟೆ-69, ಸಂಡೂರು-10, ಕೂಡ್ಲಿಗಿ-24 ಒಟ್ಟು 300 ಜನ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ . 

        ನಿನ್ನೆ ನಡೆದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅರ್ಹ ಫಲಾನುಭವಿಗಳಿಗೆ 3 ಕೋಟಿ ಅನುದಾನ ಬಿಡುಗಡೆ ಮಾಡಲಾಯಿತು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಹಾಗೂ ಅನುಷ್ಠಾನ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ಹೆಸರನ್ನು ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು. ಮುನ್ನೂರು ಸದಸ್ಯರ ಹೆಸರನ್ನು ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ನೇರವಾಗಿ ಹಾಗೂ ಬಹಿರಂಗವಾಗಿ ಆಯ್ಕೆ ಮಾಡಿದ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಬೆಂಗಳೂರು ಹಾಗೂ ಗುಡಾರ ಗುಡಸಿ ಕಲ್ಯಾಣ ಸಂಘ, ಬಳ್ಳಾರಿ ಇವರು ಮನಃಪೂರ್ವಕವಾಗಿ ಅಭಿನಂದಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link