ವಾಲ್ಮೀಕಿ ಸಮಾಜದ ಸಾಧಕರಿಗೆ ಪುರಸ್ಕಾರ

ಚಿತ್ರದುರ್ಗ

         ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಡಿ.25 ರಂದು ಬೆಳಿಗ್ಗೆ 10.30ಕ್ಕೆ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ತಿಳಿಸಿದರು.

             ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಅನೇಕ ವರ್ಷಗಳಿಂದ ನಮ್ಮ ಸಂಘವು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಆದರೆ ಕಾರಣಾಂತರಗಳಿಂದ ಈಗ್ಗೆ ನಾಲ್ಕು ವರ್ಷಗಳ ಕಾಲ ಕಾರ್ಯಕ್ರಮ ನಡೆಸಲು ಆಗಲಿಲ್ಲ. ಈಗ ಮತ್ತೆ ಆರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ 41 ವಿದ್ಯಾರ್ಥಿಗಳು ಹಾಗೂ ಸಾಧಕ ನೌಕರರನ್ನು ಪುರಸ್ಕರಿಸಲಾಗುವುದು ಎಂದು ಹೇಳಿದರು.

           ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಉದ್ಘಾಟಿಸುವರು. ಸಂಸದ ಬಿ.ಎನ್.ಚಂದ್ರಪ್ಪ, ಶಾಸಕರಾದ ಬಿ.ಶ್ರೀರಾಮುಲು, ಟಿ.ರಘುಮೂರ್ತಿ, ಜಿ.ಪಂ. ಅಧ್ಯಕ್ಷ ಸೌಭಾಗ್ಯ ಬಸವರಾಜನ್, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ಪ್ರತಿಭಾ ಪುರಸ್ಕಾರ ನಡೆಸಿಕೊಡುವರು. ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು. ಡಾ.ಎನ್.ಬಿ.ಪ್ರಹ್ಲಾದ್, ಪೊಲೀಸ್ ಅಧಿಕಾರಿಗಳಾದ ಪಿ.ಪಾಪಣ್ಣ, ವೆಂಕಟಪ್ಪ ನಾಯಕ, ಜಿ.ಎಂ.ತಿಪ್ಪೇಸ್ವಾಮಿ ಮುಖ್ಯಅತಿಥಿಗಳಾಗಿ ಭಾಗವಹಿಸುವರು ಎಂದರು.

          ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ಮಾತನಾಡಿ, ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ನಡೆಸಲಾಗುತ್ತಿದೆ. ಚಿತ್ರದುರ್ಗ ತಾಲ್ಲೂಕಿಗೆ ಸಂಬಂಧಿಸಿದ ಯಾವುದೇ ವಿದ್ಯಾರ್ಥಿಗಳು ಹೊರಗಡೆ ವಿದ್ಯಾಭ್ಯಾಸ ಮಾಡುತ್ತಿದ್ದಲ್ಲಿ, ಅಂಥವರು ಸಹ ಸಂಘದವರನ್ನು ಸಂಪರ್ಕಿಸಿ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

           ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ, ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಒಂದು ಉತ್ತಮ ಕಾರ್ಯಕ್ರಮ ಮಾಡಲಾಗುತ್ತಿದೆ. ಓದುವ ಮಕ್ಕಳನ್ನು ಪ್ರೋತ್ಸಾಹಿಸಿದಾಗ ಅವರು ಮತ್ತಷ್ಟು ಚೆನ್ನಾಗಿ ಓದುತ್ತಾರೆ. ಇವರನ್ನು ನೋಡಿ ಇತರರೂ ಸಹ ಉತ್ತೇಜಿತರಾಗುತ್ತಾರೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ನಾನು ಎಲ್ಲಾ ರೀತಿಯಿಂದಲೂ ಸಹಕಾರ ನೀಡುತ್ತೇನೆಂದು ತಿಳಿಸಿದರು.

           ಸುದ್ದಿಗೋಷ್ಠಿಯಲ್ಲಿ ಚಿತ್ರದುರ್ಗ ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಸಂಸ್ಥಾಪಕ ಅಧ್ಯಕ್ಷ ಸಿ.ಜಿ.ಶ್ರೀನಿವಾಸ್, ಉಪಾಧ್ಯಕ್ಷರಾದ ಓ.ಬಿ.ಬಸವರಾಜಪ್ಪ, ಹನುಮಂತಪ್ಪ ಪೂಜಾರ್, ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು, ಖಜಾಂಚಿ ಎಸ್.ಬಿ.ರವಿಶಂಕರ್ ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link