ಪರಿಶಿಷ್ಟ ವರ್ಗಗಗಳ ಬಾಲಕೀಯರ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆ

ಜಗಳೂರು :

         ಕೇಂದ್ರ ಸರ್ಕಾರವು ಪರಿಶಿಷ್ಟ ವರ್ಗ, ಪರಿಶಿಷ್ಟ ಜಾತಿ ಸೇರಿದಂತೆ ಹಿಂದುಳಿದವರ ಇತರೇ ಜನಾಂಗದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ಮುಟ್ಟಿಸುವಂತ ಕೆಲಸ ಮಾಡುತ್ತಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.
ಪಟ್ಟಣದ ವಾಲ್ಮೀಕಿ ಸಮುದಾಯ ಭವನ ಆವರಣದಲ್ಲಿ 2.75 ಕೋಟಿ ರೂ. ವೆಚ್ಚದ ಸರ್ಕಾರಿ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗಗಗಳ ಬಾಲಕೀಯರ ವಿದ್ಯಾರ್ಥಿ ನಿಲಯಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

         ಬಹು ವರ್ಷಗಳ ಬೇಡಿಕೆಯಾಗಿದ್ದು ಎಸ್‍ಸ್ಟಿ ಬಾಲಕೀಯರ ವಿದ್ಯಾರ್ಥಿ ನಿಲಯಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದು 2.75 ಕೋಟಿ ರೂ. ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಾಣವಾಗುತ್ತಿದ್ದು, ಕಾಮಗಾರಿಯು ಕಳಪೆಯಾಗದಂತೆ ಗುತ್ತಿಗೆದಾರರು ನಿಗಾ ವಹಿಸಬೇಕೆಂದು ಸೂಚಿಸಿದರು. ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಶಾಲಾ ಕಟ್ಟಡ ಹಾಗೂ ಪಟ್ಟಣದ ಹೋ.ಚಿ.ಬೋರಯ್ಯ ಕಾಲೇಜಿನಲ್ಲಿ ರಂಗಮಂದಿರ ಮತ್ತು ಬಸ್ ನಿಲ್ದಾಣ, ಶುದ್ದಕುಡಿಯುವ ನೀರಿನ ಘಟಕ, ವಾಲ್ಮೀಕಿ ಸಮುದಾಯ ಭವನಕ್ಕೆ ರಂಗಮಂದಿರದ ಬೇಡಿಕೆ ಇದ್ದು ಮುಂದಿನ ದಿನದಲ್ಲಿ ಶಾಸಕ ಎಸ್.ವಿ.ರಾಮಚಂದ್ರ ಜೊತೆಗೂಡಿ ಮಾಡಿಕೊಡಲಾಗುವುದು ಎಂದರು.

         ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ ಸಂಸದ ಜಿ.ಎಂ.ಸಿದ್ದೇಶ್ವರ್ ಸಹಕಾರದಿಂದ ತಾಲೂಕಿಗೆ 25 ಕೋಟಿ ರೂ. ವೆಚ್ಚದ ಏಕಲವ್ಯ ಮಿಲ್ಟ್ರೀ ಶಾಲೆ ಮಂಜೂರಾಗಿದ್ದು ಶೀಘ್ರವೇ ಗುದ್ದಲಿ ಪೂಜೆ ನೆರವೇರಿಸಲಾಗುವುದು. ವಾಲ್ಮಿಕಿ ಭವನದ ಮುಂಭಾಗದಲ್ಲಿ ವಾಲ್ಮಿಕಿ ಪ್ರತಿಮೆಯನ್ನು ಹಾಗೂ ರಂಗಮಂದಿರವನ್ನು ಕಟ್ಟಿಸಲಾಗುವುದೆಂದು ಅವರು ಭರವಸೆ ನೀಡಿದರು. ತಾಲೂಕಿನಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದ್ದು, ಶೀಘ್ರವೇ ದುಡಿಯುವ ಕೈಗಳಿಗೆ ಕೆಲಸ ನೀಡಲು ದೊಣೆಹಳ್ಳಿ ಬಳಿ 15 ಎಕರೆ ಜಾಗದಲ್ಲಿ ಕಾರ್ಖಾನೆಯನ್ನು ಮಾಡಲಾಗುವುದು.

        ಜಗಳೂರು ಪಟ್ಟಣವನ್ನು ಮಾಧರಿ ಪಟ್ಟಣವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಈ ಹಿಂದೆ ಕೆರೆ ಒತ್ತುವರಿಯಾಗಿ ಮನೆಗಳನ್ನು ತೆರವುಗೊಳಿಸಿದ್ದು, ಮನೆ ಕಳೆದುಕೊಂಡವರಿಗೆ ಶೀಘ್ರವೇ ಮನೆ ನೀಡಲಾಗುವುದು. ಕೆ.ಎಸ್.ಆರ್.ಟಿ.ಸಿ.ಡಿಪೋ ಮಂಜೂರಾಗಿದ್ದು ಜಮೀನು ನೀಡಲು ವಿಳಂಭವಾಗಿದೆ. ಖ.16 ರಂದು ಪಟ್ಟಣದ ಬಸ್ ನಿಲ್ದಾಣದ ಶಂಕುಸ್ಥಾಪನೆಯಾಗಲಿದ್ದು ಅಂಧೆ ಸಾಧ್ಯವಾದಷ್ಟು ಡಿಪೋ ನಿರ್ಮಾಣದ ಕಾಮಗಾರಿಗೂ ಶಂಕುಸ್ಥಾಪನೆ ಮಾಡುವ ಗುರಿ ಹೊಂದಿದ್ದೇವೆ. ಕೆರೆಗಳಿಗೆ ನೀರು ತುಂಭಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ 28 ನೇ ತಾರೀಕು ಸಿರಿಗೆರೆ ಶ್ರೀಗಳು ಸಭೆ ಕರೆಯಲಾಗಿದ್ದು ,ನಾವೆಲ್ಲರೂ ಸೇರಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತೇವೆ ಎಂದವರು ಹೇಳಿದರು.

           ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ರಶ್ಮೀರಾಜಪ್ಪ, ಸದಸ್ಯರಾದ ಎಸ್.ಕೆ.ಮಂಜುನಾಥ್, ಸವಿತಾಕಲ್ಲೇಶಪ್ಪ, ಶಾಂತಕುಮಾರಿ, ಎಪಿಎಂಸಿ ಅಧ್ಯಕ್ಷ ಹನುಮಂತಪ್ಪ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ, ಸದಸ್ಯ ಬಸವರಾಜ್, ನಾಯಕ ಸಮಾಜದ ಉಪಾಧ್ಯಕ್ಷ ಓಬಣ್ಣ, ಕಾರ್ಯದರ್ಶಿ ಸೂರಲಿಂಗಪ್ಪ, ಪಟ್ಟಣ ಪಂಚಾಯ್ತಿ ಸದಸ್ಯರಾದ ಎಂಎಲ್‍ಎ ತಿಪ್ಪೇಸ್ವಾಮಿ, ಪಾಪಲಿಂಗಪ್ಪ, ರಮೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಡಿ.ವಿ.ನಾಗಪ್ಪ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಕಾರ್ಯದರ್ಶಿ ಜೆ.ವಿ.ನಾಗರಾಜ್, ಮುಖಂಡರಾದ ಬಿಸ್ತುವಳ್ಳಿ ಬಾಬು, ಅರವಿಂದ್, ಸೋಮನಹಳ್ಳಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಅಶೋಕ್, ಗಂಗಪ್ಪ, ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಭೂಸೇನಾನಿಗಮದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap