ತುಮಕೂರು
ಕಾಶ್ಮೀರದಲ್ಲಿ ಉಗ್ರರ ದಾಳಿಗೆ 42 ಭಾರತೀಯ ಯೋಧರು ಬಲಿಯಾದ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ ಹುತಾತ್ಮ ಯೋಧರಿಗೆ ಭಾವಪೂರ್ಣವಾಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಾಲಿಕೆ ಕಚೇರಿಯಲ್ಲಿ ಹುತಾತ್ಮರ ನೆನಪಿನ (ಅಮರ್ ಜವಾನ್) ಭಾವಚಿತ್ರ ಇರಿಸಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಭಾರತದ ಆ ಎಲ್ಲ ವೀರ ಯೋಧರಿಗೆ ಗೌರವವನ್ನು ಸಮರ್ಪಿಸಲಾಯಿತು.
ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಯಾಜ್ ಅವರ ನೇತೃತ್ವದಲ್ಲಿ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪಾಲಿಕೆ ಸದಸ್ಯ ಮಂಜುನಾಥ್, ಆರೋಗ್ಯಾಧಿಕಾರಿ ಡಾ. ನಾಗೇಶ್‍ಕುಮಾರ್, ಎಕ್ಸಿಕ್ಯುಟೀವ್ ಇಂಜಿನಿಯರ್ ತಿಪ್ಪೇರುದ್ರಪ್ಪ, ಪರಿಸರ ಇಂಜಿನಿಯರ್‍ಗಳಾದ ಮೃತ್ಯುಂಜಯ, ಕೃಷ್ಣಮೂರ್ತಿ, ಲೆಕ್ಕಾಧಿಕಾರಿ ಶಿವಣ್ಣ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಹನುಮಂತರಾಜು, ಲೆಕ್ಕ ಶಾಖೆಯ ವಿಶ್ವನಾಥ್, ವ್ಯವಸ್ಥಾಪಕ ಮಹೇಶ್ ಸೇರಿದಂತೆ ಪಾಲಿಕೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ನೌಕರ ಸಿಬ್ಬಂದಿ ವರ್ಗದವರು, ಪಾಲಿಕೆಗೆ ಆಗಮಿಸಿದ್ದ ಸಾರ್ವಜನಿಕರು ಹಾಜರಿದ್ದು, ಎಲ್ಲರೂ ಪುಷ್ಪಾರ್ಚನೆ ಮೂಲಕ ವೀರ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ