ಸಿಎಂ ಬದಲಾವಣೆ :ಹೇಳಿಕೆ ನೀಡುವಷ್ಟು ದೊಡ್ಡವನಲ್ಲ : ಸುಧಾಕರ್

ಬೆಂಗಳೂರು:

     ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಹೇಳಿಕೆ ನೀಡುವಷ್ಟು ದೊಡ್ಡವನಲ್ಲ, ನಾನು ಸಣ್ಣವನು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು. ನಗರದ ಸಿದ್ದಾರ್ಥ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಕೇಂದ್ರದಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್‍ನನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

      ಮುಖ್ಯಮಂತ್ರಿಗಳೇ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ, ಅವರಿಂದಲೇ ಅಧಿಕೃತವಾಗಿ ಮಾಹಿತಿ ಪಡೆದುಕೊಳ್ಳಿ, ಸತ್ಯ ಗೊತ್ತಿಲ್ಲದೇ ಮನಸೋ ಇಚ್ಚೇ ಮಾತನಾಡುವುದು ಸರಿಯಲ್ಲ. ನಾನು ಈ ಬಗ್ಗೆ ಏನೂ ಹೇಳುವುದಿಲ್ಲ. ಕೆಲವರು ಮಂತ್ರಿ ಆಗುವ ಬಗ್ಗೆ ಇಚ್ಛೆ ವ್ಯಕ್ತಪಡಿಸಿದ್ದಾರೆ, ಅದೇನು ಅಪರಾಧ ಅಲ್ಲವಲ್ಲಾ? ಅವರ ಅಭಿಪ್ರಾಯ ಹೊರಹಾಕಿದ್ದಾರೆ ಅಷ್ಟೆ, ಆದರೆ ಈ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳೇ ನೇರವಾಗಿ ಉತ್ತರಿಸುವರು ಎಂದರು.

      ರಾಜ್ಯದಲ್ಲಿ ಕೊರೋನ ಪ್ರಕರಣ ಹೆಚ್ಚುತ್ತಿದ್ದು, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೋರೋನ ಪ್ರಕರಣ 5 ಲಕ್ಷಕ್ಕೆ ಏರಿಕೆ ಆಗಿದೆ ಎನ್ನುವುದಕ್ಕಿಂತ ಇದರಲ್ಲಿ 4 ಲಕ್ಷ ಜನರು ಗುಣಮುಖರಾಗಿದ್ದಾರೆ ಎಂಬುದು ಗಮನಾರ್ಹ.

     ಅಷ್ಟೆ ಅಲ್ಲದೆ, ದೇಶದಲ್ಲಿ ಕೋರೊನ ಸಾವಿನ ಪ್ರಕರಣಕ್ಕಿಂತ ರಾಜ್ಯದಲ್ಲಿ ಶೇ.1.56 ರಷ್ಟು ಕಡಿಮೆ ಇದೆ. ಹೀಗಿರುವಾಗ ಕೊರೋನ ನಿಯಂತ್ರಣದಲ್ಲಿ ನಿರ್ಲಕ್ಷ್ಯದ ಪ್ರಶ್ನೆ ಎಲ್ಲಿಂದ ಬರುತ್ತದೆ. ವಿರೋಧ ಪಕ್ಷದ ನಾಯಕರು ಅಂಕಿ-ಅಂಶ ಆಧರಿಸಿ ಹೇಳಿಕೆ ನೀಡಲಿ ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಲ್ಯಾಬ್ ಉದ್ಘಾಟನೆ: 

      ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಪರೀಕ್ಷಾ ಲ್ಯಾಬ್ ಉದ್ಘಾಟನೆಯಿಂದ ತುಮಕೂರಿನಲ್ಲಿ ನಿತ್ಯ 2 ಸಾವಿರ ಕೊರೋನ ಟ್ರಸ್ಟ್ ಮಾಡಲು ಸಾಧ್ಯವಾಗಲಿದೆ ಎಂದು ಡಾ.ಕೆ. ಸುಧಾಕರ್ ಹೇಳಿದರು. ನಾನು ಓದಿದ ಕಾಲೇಜಿನಲ್ಲಿಯೇ ಲ್ಯಾಬ್ ಉದ್ಘಾಟನೆಯ ಅವಕಾಶ ಸಿಕ್ಕಿದ್ದು ಸಂತಸ ತಂದಿದೆ. ಇದೂ ಸೇರಿ ತುಮಕೂರಿನಲ್ಲಿ ಒಟ್ಟು ಮೂರು ಅತ್ಯಾಧುನಿಕ ಕೋವಿಡ್ ಪರೀಕ್ಷಾ ಲ್ಯಾಬ್ ತೆರೆಯಲಾಗಿದ್ದು, ಇದರಿಂದ ಈ ಭಾಗದ ಜನರಿಗೆ ಕೊರೊನ ಪರೀಕ್ಷಾ ಪ್ರಮಾಣ ಹೆಚ್ಚಿಸಲಾಗಿದೆ ಎಂದರು.

     ಈ ಭಾಗದಲ್ಲಿ ಐಸಿಯು ಬೆಡ್‍ಗಳ ಪ್ರಮಾಣ ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ. ಸಿದ್ದಾರ್ಥ ಮೆಡಿಕಲ್ ಕಾಲೇಜಿನಲ್ಲಿ ಈಗಾಗಲೇ 50 ಐಸಿಯು ಬೆಡ್ ನಿರ್ಮಾಣ ಮಾಡಿದ್ದು, ಈ ಪ್ರಮಾಣ ಹೆಚ್ಚಿಸಲು ನಮ್ಮ ಸರಕಾರ ಇವರಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಾದುಸ್ವಾಮಿ ಅವರು ಮಾತನಾಡಿ, ಜಿಲ್ಲೆಯ ಜನರಿಗೆ ಕೋವಿಡ್ ಪರೀಕ್ಷೆ ಮಾಡಲು ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಗೆ ರ ರಾಜ್ಯಸರ್ಕಾರಕ್ಕೆ ಊರು ಗೋಲಾಗಿದೆ. ಇದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

     ಆರಂಭದಲ್ಲಿ ಡಾ ಜಿ ಪರಮೇಶ್ವರ್ ಅವರು ಕ್ವಾರೈಂಟೈನ್ ಮಾಡಲು 700 ಬೆಡ್ ಇರುವ ಹಾಸಿಗೆ ವ್ಯವಸ್ಥೆ ಮಾಡಿದ್ದರು ಅದರ ಜೂತೆಗೆ ಈಗ ಪ್ರತಿ ದಿನ 2000 ಪರೀಕ್ಷೆ ಮಾಡಲು ಅನುಕೂಲವಾಗಿದೆ. ಜನರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಿ ಎಂದು ಅವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap