ಸಿದ್ದರಾಮಯ್ಯ ಅವರ ಸೋಲಿಗೆ ಕಾರಣ ನಾನಲ್ಲ: ದೇವೇಗೌಡ

ಹಾಸನ:

     ಈ ಬಾರಿ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯರವರು ಜೆಡಿಎಸ್ ನ ಜಿ ಟಿ ದೇವೇಗೌಡರ ಎದುರು ಸೋಲು ಅನುಭವಿಸಿದ್ದರು.ಈ ಸೋಲು ಅವರ ಮನಸಿಗ್ಗೆ ತೀವ್ರ ನೋವು  ಉಂಟುಮಾಡಿರಬಹುದು  .ಆದರೆ ವಾಸ್ತವದಲ್ಲಿ ಸಿದ್ದರಾಮಯ್ಯರ ಸೋಲಿಗೆ ನಾನು ಅಥವಾ ಜಿ.ಟಿ. ದೇವೇಗೌಡ ಕಾರಣರಲ್ಲ ಎಂದು ಎಚ್ ಡಿ ದೇವೇಗೌಡ ಸ್ಪಷ್ಟವಾಗಿ ತಿಳಿಸಿದ್ದಾರೆ.

    ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ನಾನು ಹೋಗಿಯೇ ಇಲ್ಲ. ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದು ಅಲ್ಲಿನ ಜನತೆ ಎಂದು ತಿಳಿಸಿದ್ದಾರೆ. ನಾನೂ ಸಹ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದೇನೆ. ಸಿದ್ದರಾಮಯ್ಯ ಅವರಿಗೂ ಅದರ ಅನುಭವ ಆಗಿದೆ. ಅವರು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಹೋದರು. ಬಳಿಕ ಐದು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದರು ಎಂದರು.

      ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಚುನಾವಣಾ ಪ್ರಚಾರಕ್ಕೆ ಬಂದ ದೇವೇಗೌಡ ಅವರು ತಮ್ಮ ರಾಜಕೀಯ ಸ್ಥಿತ್ಯಂತರ, ಸಿದ್ದರಾಮಯ್ಯ ಅವರ ಸೋಲು, ಮೋದಿ ಮತ್ತು ಅಡ್ವಾಣಿ ಅವರ ಸಂಬಂಧ ಮುಂತಾದ ವಿಚಾರಗಳ ಕುರಿತು ಮಾತನಾಡಿದ ಅವರು , ಮೋದಿ ಅವರು ಹಲವಾರು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಮೇಲೆ ಕಣ್ಣಿಟ್ಟಿದ್ದು. ಚುನಾವಣೆ ಸಂದರ್ಭದಲ್ಲಿ ಯಾಕೆ ಹೀಗೆ ಮೋದಿ ಮಾಡ್ತಿದ್ದಾರೋ ಗೊತ್ತಾಗುತ್ತಿಲ್ಲ. ಆದಾಯ ತೆರಿಗೆ ಇಲಾಖೆ, ಇಡಿ ಮುಂತಾದ ಸಂಸ್ಥೆಗಳನ್ನು ಅವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap