ಹಿರಿಯೂರು :
ಹಿರಿಯೂರು ಲೋಕಸಭೆ ಚುನಾವಣೆ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಹಿರಿಯೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಮನೆಗಳಿಗೆ ಭೇಟಿ ನೀಡಿ ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು.ಕ್ಷೇತ್ರದ ಮತದಾರರು ಬಿಜೆಪಿ ಬೆಂಬಲಿಸಿದರೆ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಹಿರಿಯೂರು ವಿಧಾನಸಭೆ ಕ್ಷೇತ್ರದಿಂದ ಮೊದಲ ಬಾರಿಗೆ ಬಿಜೆಪಿಯ ಪೂರ್ಣಿಮಾ ಅವರನ್ನು ಆಯ್ಕೆ ಮಾಡಿದ್ದು ಶ್ಲಾಘನೀಯ ಎಂದರು.ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಮತದಾರರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್‍ಕುಮಾರ್ ಮಾತನಾಡಿ, ಮೋದಿ ಅವರ ಐದು ವರ್ಷದ ಸಾಧನೆಯನ್ನು ಇಡೀ ಜಗತ್ತೇ ಶ್ಲಾಘಿಸಿದೆ. ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮೆಲ್ಲರ ಗುರಿಯಾಗಬೇಕು. ಜಿಲ್ಲೆಯಲ್ಲಿ ಬಿಜೆಪಿ ಪರವಾದ ಅಲೆಯಿದ್ದು. ಯುವಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮೋದಿ ಅವರನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹಾಲಪ್ಪ, ವಿಶ್ವನಾಥ್, ವೆಂಕಟೇಶ್, ಕೆ.ಆರ್.ಹಳ್ಳಿ ರವಿ, ಆರಾಧ್ಯ, ಲಕ್ಷ್ಮೀಪತಿ, ಸಾಗರ್, ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ