ರಮೇಶ್ ಮುಂದಿನ ನಡೆ ಗೊತ್ತಿಲ್ಲ: ಜಾರಕಿಹೊಳಿ

ದಾವಣಗೆರೆ:

    ಸಧ್ಯ ಶಾಸಕ ರಮೇಶ ಜಾರಕಿಹೊಳಿ ತಟಸ್ಥವಾಗಿದ್ದಾರೆ. ಆದರೆ, ಅವರ ಮುಂದಿನ ನಡೆ ಏನೆಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

     ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷ ಬದಲಿಸುವ ಬೆದರಿಕೆ ಹಾಕಿದ ರಮೇಶ್ ಜಾರಕಿಹೊಳಿ ಈಗ ತಟಸ್ಥರಾಗಿದ್ದಾರೆ. ಅವರ ಮುಂದಿನ ನಡೆ ಏನೆಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

    ಸಾಕಷ್ಟು ಹೊಯ್ದಾಟಗಳ ಮಧ್ಯೆಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವು ಸುಭದ್ರವಾಗಿದ್ದು, ಐದು ವರ್ಷ ಆಡಳಿತವನ್ನು ಸುಭದ್ರವಾಗಿಯೇ ಪೂರೈಸಲಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಾಕಿ ಉಳಿದ 4 ವರ್ಷ ಅವದಿಯನ್ನೂ ಪೂರೈಸುತ್ತಾರೆ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದರು.

      ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಸರ್ಕಾರಕ್ಕೆ ಯಾವುದೇ ಅಪಾಯವೂ ಇಲ್ಲ. ಯಾರಿಗೆ ಸಚಿವ ಸ್ಥಾನ ಎಂಬುದು ಜೂ.10ರಂದು ಪಕ್ಕಾ ಆಗಲಿದೆ. ಸಂಪುಟ ವಿಸ್ತರಣೆ ನಂತರ ಉಂಟಾಗುವ ಭಿನ್ನಮತವನ್ನು ಕಾಂಗ್ರೆಸ್ ಹೈಕಮಾಂಡ್ ನಿಭಾಯಿಸಲು ಸಶಕ್ತವಾಗಿದೆ. ಸರ್ಕಾರವೆಂದ ಮೇಲೆ ಏಳುಬೀಳುಗಳು ಸಹಜ. ಏನೇ ಆದರೂ ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap