ನಾನು ಸರ್ಕಾರ ಉಳಿಸುತ್ತೇನೆ-ಆದರೆ ಯಾವುದನ್ನೂ ಕಾದು ನೋಡಿ : ಎಚ್ ಡಿ ಕೆ

ಬೆಂಗಳೂರು:

      ನಗರದ ಯಶವಂತಪುರ ವಿಧಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಅವರು,ನಾನು ಎಂದಿಗೂ ಜಾತಿಯ ಹೆಸರಲ್ಲಿ ರಾಜಕಾರಣ ಮಾಡಿಲ್ಲ ಮಾಡುವುದು ಇಲ್ಲ. ಸಿಎಂ ಬಿ ಎಸ್ ವೈ ಬಡ ಜನರು ಭೇಟಿ ಮಾಡುವುದಕ್ಕೆ ಸಾಧ್ಯಗಾವುದಿಲ್ಲ.ಈ ಭಾಗದ ಮಾಜಿ ಶಾಸಕರು ಹಿಂದಿನ ಸರ್ಕಾರ ಹಣವನ್ನೇ ನೀಡಿಲ್ಲ ಎಂದು ಹೇಳಿದ್ದಾರೆ ನಿಮ್ಮೆಲ್ಲರ ಸಮ್ಮುಖದಲ್ಲಿ ಅವರಿಗೆ ಸವಾಲು ಹಾಕುತ್ತೇನೆ.ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ. ನೂರಾರು ಕೋಟಿ ಈ ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದೇನೆ. ಈ ಅಭ್ಯರ್ಥಿ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ವಿರುದ್ಧ ಕುಮಾರಸ್ವಾಮಿ ತಿರುಗೇಟು ನೀಡಿದರು.

      ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು 17 ಶಾಸಕರಿಗೆ ಆಮಿಷ ಒಡ್ಡಿ ನಮ್ಮ‌ ಸರ್ಕಾರ ಪತನಗೊಳಿ ಸಿದರು . ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣಾ ಪ್ರಚಾರ ದ ವೇಳೆ ಅಭಿವೃದ್ಧಿ ಬಗ್ಗೆ ಮಾತನಾಡಿದ್ದು,ಅನರ್ಹರಿಗಾಗಿ ಪ್ರಾಣ ಕೊಡುತ್ತೇನೆ ಎಂದು ಹೇಳುತ್ತಿದ್ಧಾರೆ.ಗೋಕಾಕ್ ನಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಮುದಾಯ ಏನಾದ ರೂ ಆಗಲಿ, ಬೇರೆಯವರು ಗೆಲ್ಲಲಿ ಎಂದು ಹೇಳುತ್ತಾರೆ. ಇವರು ಎಷ್ಟು ಕೀಳುಮಟ್ಟಕ್ಕೆ ಇಳಿದಿದ್ದಾರೆ ಎನ್ನುವುದನ್ನು ನೀವೇ ನೋಡಿ ಎಂದು ಲೇವಡಿ ಮಾಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap