ಬೆಂಗಳೂರು
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಯಾವುದೇ ಉದ್ದೇಶವನ್ನು ತಾವು ಹೊಂದಿಲ್ಲ. ಈ ತಿಂಗಳ 28 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಮಿತ್ರ ಪಕ್ಷಗಳ ಜಂಟಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ತಾವು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತಮ್ಮನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ತಾವು ಪಕ್ಷದ ನಾಯಕತ್ವದ ಬಗ್ಗೆ ಯಾವುದೇ ಅಸಮಾಧಾನ ಹೊಂದಿಲ್ಲ. ವೈದ್ಯರು ಸ್ವಲ್ಪ ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದು, ಅದರಂತೆ ಮೈಸೂರಿಗೆ ತೆರಳುತ್ತಿರುವುದಾಗಿ ತಿಳಿಸಿದರು.
ವೈಯಕ್ತಿಕ ವಿಚಾರಗಳಿಗೆಲ್ಲ ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ. ಪಕ್ಷದಲ್ಲಿ ಆರಾಮವಾಗಿ ಇದ್ದೇನೆ. ಸ್ವಲ್ಪ ವಿಶ್ವಾಂತಿ ತೆಗೆದುಕೊಂಡು ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ಮಾಡುವುದಾಗಿ ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ