ದಾವಣಗೆರೆ:
ಐವತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜುನಾಥ್ ತಿಳಿಸಿದ್ದಾರೆ.ಹೊನ್ನಾಳಿ ಪಟ್ಟಣದ ದೇವನಾಯ್ಕನಹಳ್ಳಿ ಶಾಲೆಯಲ್ಲಿ ತೆರೆದಿದ್ದ ಮತಗಟ್ಟೆ ಸಮಖ್ಯೆ 101ರಲ್ಲಿ ಪತ್ನಿ ಲಕ್ಷ್ಮೀ ಅವರೊಂದಿಗೆ ಹಕ್ಕು ಚಲಾಯಿಸಿ ಮಾತನಾಡಿದ ಅವರು, ಮಂಜಪ್ಪ ಬಡವ ಎಂದು ಜನಗಳೇ ದೇಣಿಗೆ ಕೊಟ್ಟು ಬೆಂಬಲ ನೀಡುತ್ತಿದ್ದಾರೆ. ಐವತ್ತು ಸಾವಿರಕ್ಕೂ ಹೆಚ್ಚಿನ ಮತಗಳಿಂದ ಗೆಲ್ಲುವ ವಿಶ್ವಾಸವಿದೆ ಎಂದರು.
ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು ಹಾಗೂ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳು ದಾವಣಗೆರೆಯನ್ನು ಸಿಂಗಾಪುರ ಸಿಟಿ ರೀತಿಯಲ್ಲಿ ಮಾಡಿದ್ದಾರೆ. ಆದರೆ, 15 ವರ್ಷಗಳ ಕಾಲ ಸಂಸದರಾಗಿದ್ದವರು ಅಂತಹ ಯಾವುದೇ ಕೆಲಸ ಮಾಡಿಲ್ಲ. ಹೀಗಾಗಿ ಜನ ಬದಲಾವಣೆ ಬಯಸಿದ್ದಾರೆ ಎಂದರು.