ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ: ಡಾ.ಎಸ್ಸೆಸ್

ದಾವಣಗೆರೆ:

         ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡಲ್ಲ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಶನಿವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಪಕ್ಷದ ಹೈಕಮಾಂಡ್ ಸಚಿವ ಸ್ಥಾನವನ್ನು ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ. ಆದರೆ, ನಾವಂತೂ ಮಂತ್ರಿ ಸ್ಥಾನಕ್ಕಾಗಿ ಯಾರ ಬಳಿಯೂ ಭಿಕ್ಷೆ ಬೇಡಲು ಹೋಗಲ್ಲ ಎಂದು ತೀಕ್ಷಣವಾಗಿ ಪ್ರತಿಕ್ರಯಿಸಿದರು.

            ನನಗೆ ಯಾರಿಂದಲೂ ಫೋನು ಬಂದಿಲ್ಲ, ಯಾವ ಲೀಡರ್‍ಗೂ ಸಚಿವ ಸ್ಥಾನ ನೀಡುವಂತೆ ತಾವು ಕೇಳಿಯೂ ಇಲ್ಲ. ಸಚಿವ ಸ್ಥಾನ ನೀಡಬೇಕೋ ಅಥವಾ ಬಿಡಬೇಕೋ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

          ಎಂ.ಬಿ.ಪಾಟೀಲ್‍ಗಾದರೂ ಕೊಡಲಿ, ಬೇರೆ ಯಾರಿಗಾದರೂ ಕೊಡಲಿ. ಸಚಿವ ಸ್ಥಾನದ ವಿಚಾರವಾಗಿ ನಾನಂತೂ ದೆಹಲಿಗೆ ಹೋಗಿಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಕಡೆಗಣಿಸಿದರೆ ಮುಂದೆ ಅನುಭವಿಸುತ್ತಾರಷ್ಟೇ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ