ಬೆಂಗಳೂರು
ಆಕಸ್ಮಿಕ ಬೆಂಕಿ ತಗುಲಿ ಮನೆ ಮುಂಭಾಗ ನಿಲ್ಲಿಸಿದ್ದ ಹುಂಡೈ ಐ20 ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಲ್ಸ್ ಪಾರ್ಕ್ ಬಳಿ ಭಾನುವಾರ ಮಧ್ಯರಾತ್ರಿ ನಡೆದಿದೆ.
ಕೋಲ್ಸ್ ಪಾರ್ಕ್‍ನ ಸಿದ್ದಾರ್ಥ್ ಅವರು ಮನೆಯ ಮುಂಭಾಗ ಹುಂಡೈ ಐ20 ಕಾರು ನಿಲ್ಲಿಸಿದ್ದು ಮಧ್ಯರಾತ್ರಿ 3ರ ವೇಳೆ ಬೆಂಕಿ ತಗುಲಿ ಸುಟ್ಟು ಹೋಗಿದೆ ಕಾರಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂದು ಶಂಕಿಸಲಾಗಿದ್ದು ಸ್ಥಳಕ್ಕೆ ಭಾರತಿನಗರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.







