ಗೌರಿಬಿದನೂರು:

ರಾಜ್ಯದ ಪ್ರತಿಯೊಬ್ಬ ರೈತರಿಗೂ ಗುರುತಿನ ಚೀಟಿ ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಜರುಗಿದ ಜನಸ್ಪಂದನ ಕಾರ್ಯಕ್ರಮದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರ ನೀಡಲಿರುವ ಗುರುತಿನ ಚೀಟಿಯಿಂದ ಸರ್ಕಾರದ ಹತ್ತು ಹಲವು ಯೋಜನೆಗಳ ಲಾಭವನ್ನು ರೈತರು ಪಡೆಯಲು ಸಹಕಾರಿಯಾಗಲಿದೆ. ಈ ಗುರುತಿನ ಚೀಟಿಯಲ್ಲಿ ರೈತರ ಆಸ್ತಿಯ ವಿವರ, ಆದಾಯ, ಜಾತಿ ಇನ್ನಿತರ ಅಂಶಗಳು ಸೇರಿದಂತೆ ಒಟ್ಟು 25 ವಿವರಗಳು ಇರಲಿವೆ. ರಾಜ್ಯದಲ್ಲಿ ಒಟ್ಟು 78 ಲಕ್ಷ ರೈತ ಕುಟುಂಬಗಳಿವೆ ಎಂದು ಸಚಿವ ಶಿವಶಂಕರ ರೆಡ್ಡಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








