ದಾವಣಗೆರೆ:
ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದಿದ್ದರೆ, ನನಗೆ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಇದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ತೇಜಸ್ವಿ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಎರಡೇ ಹೆಸರು ಚಾಲ್ತಿಯಲ್ಲಿದ್ದು, ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸುವುದಾದರೆ ತಮ್ಮದೇನು ಅಭ್ಯಂತರವಿಲ್ಲ. ಆದರೆ ನನಗೆ ಟಿಕೆಟ್ ನೀಡಿದರೆ ಬಿ-ಫಾರಂ ಶಾಮನೂರು ಶಿವಶಂಕರಪ್ಪನವರೇ ಕೊಡಬೇಕು. ಇದಕ್ಕೆ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಮ್ಮತಿ ಬೇಕು. ಈ ಬಗ್ಗೆ ಹೈಕಮಾಂಡ್‍ಗೆ ಸ್ಪಷ್ಟಪಡಿಸಿದ್ದೇನೆ ಎಂದರು.
ಮಲ್ಲಿಕಾರ್ಜುನ್ ಸ್ಪರ್ಧೆಗೆ ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಮುಖಂಡರು ನನ್ನನ್ನು ಕರೆದು ಮಾತಾಡಿದ್ದಾರೆ. ಯಾರೇ ಸ್ಪರ್ಧಿಸಲಿ, ಮೊದಲು ಟಿಕೆಟ್ ಘೋಷಣೆ ಆಗಲಿ. ಬಿಜೆಪಿಗೆ ಕ್ಷೇತ್ರದಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
