ಬೆಂಗಳೂರು
ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಗೌರವ ಬರಬೇಕಾದರೆ ಜನಪ್ರತಿ ನಿಧಿಗಳು ತಮ್ಮ ಹೊಣೆಗಾರಿಕೆಯನ್ನು ಬಹಳ ಜವಾಬ್ದಾರಿಯಿಂದ ನಿರ್ವಹಣೆ ಮಾಡಬೇಕು ಎಂದು ವಿಧಾನಸಭಾದ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಧಾನಸಭೆಗೆ ಬರಲು ಆಗದವರು ಚುನಾವಣೆಗೆಗ ಏಕೆ ನಿಲ್ಲಬೇಕು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಮಾತ್ರವಲ್ಲ ದೇಶದಲ್ಲೂ ಪ್ರಜಾಪ್ರಭುತ್ವದ ಮೌಲ್ಯ ಕುಸಿಯುತಿದೆ ಈ ಹಿನ್ನೆಲೆಯಲ್ಲಿ ಶಾಸಕರು ಬಹಳ ಜವಾಬ್ದಾರಿಯಿಂದ ತಮ್ಮ ಹೊಣೆಗಾರಿಕೆ ನಿರ್ವಹಣೆ ಮಾಡಬೇಕು ಎಂದರು.ಆಪರೇಷನ್ ಕಮಲದ ಆಡಿಯೋ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ನಾಳೆ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ಅವರು ತಿಳಿಸಿದರು.ಚುನಾವಣಾ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹೊಸ ಸುಧಾರಣೆ ಮತ್ತು ಕಠಿಣ ಶಾಸನ ಜಾರಿಗೆ ತರಬೇಕಾದ ಅಗತ್ಯವನ್ನು ಸಭಾಧ್ಯಕ್ಷ ರಮೇಶ್ ಕುಮಾರ್ ಒತ್ತಿ ಹೇಳಿದ್ದಾರೆ.