ಸರ್ಕಾರವನ್ನು ಟೀಕೆ ಮಾಡಿದರೆ ಜನರ ಭಾವನೆಗಳನ್ನು ಟೀಕಿಸಿದಂತೆ: ಯಡಿಯೂರಪ್ಪ

ಬೆಂಗಳೂರು

    ಲೋಕಸಭೆ ಮತ್ತು ಇತ್ತೀಚಿಗೆ ನಡೆದ ಉಪಚುನಾವಣೆಗಳಲ್ಲಿ ಜನ ಬಿಜೆಪಿಗೆ ಭಾರೀ ಬೆಂಬಲ ನೀಡಿದ್ದಾರೆ. ನಮ್ಮ ಸರ್ಕಾರವನ್ನು ಟೀಕೆ ಮಾಡಿದರೆ ಜನರ ಭಾವನೆಗಳನ್ನು ಟೀಕಿಸಿದಂತಾಗುತ್ತದೆ. ಈ ಮೂಲಕ ವಿಪಕ್ಷಗಳು ಅಪಹಾಸ್ಯಕ್ಕೀಡಾಗುತ್ತವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

    ರಾಜ್ಯಪಾಲ ವಜುಭಾಯಿ ವಾಲಾ ಅವರು ಫೆ.17ರಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾಡಿದ ಭಾಷಣದ ಮೇಲೆ ನಡೆದ ಚರ್ಚೆಗೆ ಇಂದು ವಿಧಾನಸಭೆಯಲ್ಲಿ ಗದ್ದಲದ ನಡುವೆಯೂ ಉತ್ತರ ನೀಡಿದ ಬಿಎಸ್‍ವೈ ಅವರು, ಅಭಿವೃದ್ಧಿ ಕುರಿತಷ್ಟೇ ನಾನು ಮಾತನಾಡಬೇಕೆಂದುಕೊಂಡಿದ್ದೆ. ಆದರೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೆಲವು ಟೀಕೆಗಳನ್ನು ಮಾಡಿದ್ದಾರೆ. ಅದಕ್ಕೆ ಉತ್ತರ ನೀಡುವಾಗ ರಾಜಕೀಯ ಮಾತನಾಡಲೇಬೇಕಿದೆ ಎಂದರು.

    ಮಹದಾಯಿ ವಿಷಯದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ. ನ್ಯಾಯಾಧೀಕರಣದ ಅಂತಿಮ ತೀರ್ಪನ್ನು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಳಸಾ ಬಂಡೂರಿ ನಾಲಾ ಯೋಜನೆಗೆ ಬಜೆಟ್‍ನಲ್ಲಿ ಹಣ ಇತ್ತು. ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

   ಈ ಹಿಂದೆ ಬರದ ಪರಿಸ್ಥಿತಿ ಇತ್ತು. ನಾನು ಅಧಿಕಾರವಹಿಸಿಕೊಂಡ ವಾರದೊಳಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಯಿತು. ಜನರ ಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸ ಮಾಡಿದ್ದೇವೆ. ಆ ಸಂದರ್ಭದಲ್ಲಿ ಸಂಪುಟ ಸಚಿವರು ಇಲ್ಲದೇ ಇದ್ದರೂ ನಾನು ಏಕಾಂಗಿಯಾಗಿ ಓಡಾಡಿದ್ದೆ. ಅಧಿಕಾರಿಗಳು ಸಹ ನನಗೆ ಸಹಕಾರ ನೀಡಿದರು. ಕೇಂದ್ರ ಸರ್ಕಾರದ ಪರವಾಗಿ ಗೃಹ ಸಚಿವ ಅಮಿತ್‍ಷಾ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಬಂದು ಪರಿಶೀಲನೆ ಮಾಡಿದ್ದರು. ಆದರೂ ಪ್ರಧಾನಿ ಬರಲಿಲ್ಲ ಎಂದು ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸುತ್ತಿವೆ ಇದು ಎಷ್ಟು ಸರಿ,

    ಪ್ರವಾಹ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ರಾಜ್ಯ ಸರ್ಕಾರ 4,413 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. 3308 ಕೋಟಿ ಖರ್ಚಾಗಿದೆ. ಕೇಂದ್ರ ಸರ್ಕಾರಕ್ಕೆ 3891 ಕೋಟಿ ನೆರವಿಗೆ ಮನವಿ ಸಲ್ಲಿಸಲಾಯಿತು. ಎನ್‍ಡಿಆರ್‍ಎಫ್‍ನಡಿ 1800 ಕೋಟಿ ರೂ. ಬಿಡುಗಡೆಯಾಗಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap