ಬೆಂಗಳೂರು
ಲಾರಿಗಳಲ್ಲಿ ಹಸುಗಳನ್ನು ತಮಿಳುನಾಡಿನ ಹೊಸೂರಿನ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿರುವ ಚಿಕ್ಕಜಾಲ ಪೆಲೀಸರು 30 ಹಸುಗಳು ವಶಕ್ಕೆ ತೆಗೆದುಕೊಂಡು ಗೋಶಾಲೆಗೆ ಕಳುಹಿಸಿದ್ದಾರೆ.
ರಾಣೆಬೆನ್ನೂರಿನ ಕುಮಾರ್ (31), ವೀರೇಶ (32) ಹಾಗೂ ಸಂಜೀವ (31) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಹಸು ಸಾಗಿಸುತ್ತಿದ್ದ 2 ಲಾರಿಗಳನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಕಲಾಕೃಷ್ಣಸ್ವಾಮಿ ತಿಳಿಸಿದ್ದಾರೆ.
ಬಂಧಿತರು ರಾಣೆ ಬೆನ್ನೂರಿನಿಂದ 2 ಲಾರಿಗಳಲ್ಲಿ 30 ಹಸುಗಳನ್ನು ತುಂಬಿಕೊಂಡು ತಮಿಳುನಾಡಿನ ಹೊಸೂರಿನಲ್ಲಿರುವ ಕಸಾಯಿ ಖಾನೆಗೆ ಹೋಗುತ್ತಿದ್ದ ಖಚಿತ ಮಾಹಿತಿಯಾಧರಿಸಿ ಚಿಕ್ಕಜಾಲ ಪೆಲೀಸರು ಬುಧವಾರ ಮಧ್ಯರಾತ್ರಿ 2ರ ವೇಳೆ ಚಿಕ್ಕಜಾಲದ ಬಳಿ ಕಾರ್ಯಾಚರಣೆ ನಡೆಸಿ ಲಾರಿಗಳನ್ನು ಅಡ್ಡಗಟ್ಟಿ ಅದರಲ್ಲಿದ್ದ 30 ಹಸುಗಳನ್ನು ವಶಕ್ಕೆ ತೆಗೆದುಕೊಂಡು ಗೋಶಾಲೆಗೆ ಕಳುಹಿಸಿದ್ದಾರೆ.ಹಸು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕೊಡಿಸಲಾಗುತ್ತಿದೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ಸಂಚಾರ ಪೆಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








