ಬೆಂಗಳೂರು:
ಕಂಟೇನರ್‍ನಲ್ಲಿ ಅನುಮಾನಾಸ್ಪದವಾಗಿ ಸಾಗಿಸುತ್ತಿದ್ದ ಮದ್ಯವನ್ನು ಗದಗ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರದ ಆಚಮಟ್ಟಿ ಕ್ರಾಸ್ ಚೆಕ್ ಪೋಸ್ಟ್ ಬಳಿ ವಶಪಡಿಸಿಕೊಳ್ಳಲಾಗಿದೆ.
ನರಗುಂದ ತಹಶೀಲ್ದಾರ್ ಆಶಪ್ಪ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಸುಮಾರು 76 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಹಾಸನದಿಂದ ಗೋಕಾಕ್‍ಗೆ ಸಾಗಿಸುತ್ತಿದ್ದ 1,700 ಬಾಕ್ಸ್ ಮದ್ಯವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಗದಗಕ್ಕೆ ರವಾನಿಸಿದ್ದಾರೆ. ಜಿಲ್ಲೆಯ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
