ಬೆಂಗಳೂರು
ಸ್ಕೂಟರ್‍ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 45 ಲಕ್ಷ ರೂ.ಗಳನ್ನು ಮಹಾಲಕ್ಷ್ಮಿಲೇಔಟ್ ಪೊಲೀಸರ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಜೆಸಿ ರಸ್ತೆಯ ವಿನೋಬಾ ನಗರದ ರಾಹುಲ್ (30) ಬಂಧಿತ ಆರೋಪಿಯಾಗಿದ್ದಾನೆ. ಮಹಾಲಕ್ಷ್ಮಿ ಲೇಔಟ್‍ನ ಜಿಡಿ ಹಾಲ್ ರಸ್ತೆಯ ಬಳಿ ಇಂದು ಬೆಳಿಗ್ಗೆ 10.45ರ ವೇಳೆ ಹೋಂಡಾ ಆಕ್ಟಿವಾ ಸ್ಕೂಟರ್‍ನಲ್ಲಿ ಆರೋಪಿಯು ಹಣ ಸಾಗಿಸುವ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.
ಆರೋಪಿಯಿಂದ ವಶಪಡಿಸಿಕೊಂಡಿರುವ ಹಣಕ್ಕೆ ಸೂಕ್ತ ದಾಖಲೆಗಳು ಇರುವುದಿಲ್ಲ. ಹಣದ ಬಗ್ಗೆ ಆರೋಪಿಯು ನಿಖರವಾದ ಮಾಹಿತಿ ನೀಡುತ್ತಿಲ್ಲ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








