ಹೊಸಪೇಟೆ :
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ದೇವಾಲಯ, ಮಸೀದಿ, ಚರ್ಚ್ ಮುಂತಾದ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸಹಾಯಕ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ತಹಶೀಲ್ದಾರ್ ಕಚೇರಿಯ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಳಲ್ಲಿ ಉದ್ಯಾನವನ, ಚರ್ಚ್, ಮಸೀದಿ ಹಾಗು ದೇವಾಲಯದಂತಹ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ಸಭೆಯಲ್ಲಿ ತಹಶೀಲ್ದಾರ್ ಎಚ್.ವಿಶ್ವನಾಥ, ನಗರಸಭೆ ಪೌರಾಯುಕ್ತೆ ಜಯಲಕ್ಷ್ಮಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಗುರುಪ್ರಸಾದ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








