ಹುಳಿಯಾರು:
ಹುಳಿಯಾರು ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿದ್ದ ಜೆಸಿಬಿ ಹಾಗೂ 4 ಟ್ರಾಕ್ಟರ್ ಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಅಮಾನಿಕೆರೆಯಲ್ಲಿ ಮಣ್ಣು ಅಕ್ರಮವಾಗಿ ಸಾಗಿಸುವುದು ಅವ್ಯಾಹಿತವಾಗಿ ನಡೆಯುತ್ತಿದೆ. ರೈತರ ತೋಟಗಳಿಗೆ ಸಾಗಿಸುವ ನೆಪವೊಡ್ಡಿ ಇಟ್ಟಿಗೆ ಕಾರ್ಖಾನೆಗಳಿಗೆ ಸಾಗಿಸುವುದು ನಡೆಯುತ್ತಿದೆ. ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ವೇಳೆ ಮಣ್ಣು ತುಂಬುತ್ತಿದ್ದ ಜೆಸಿಬಿ ಮತ್ತು 4 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿ ದೀಪಾ ಸೇರಿದಂತೆ ಇತರ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ರೈತರಾದ ಎಂಜಿನಿಯರ್ ಲಿಂಗರಾಜು, ರೈತಸಂಘದ ಹೊಸಹಳ್ಳಿ ಚಂದ್ರಣ್ಣ, ದುರ್ಗರಾಜು, ನರಸಪ್ಪ ಇದ್ದರು.