ಡಾ.ಸರೋಜಿನಿ ಮಹಿಷಿ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆಗ್ರಹ

ಬಳ್ಳಾರಿ:

      ಕರ್ನಾಟಕ ಜನಸೈನ್ಯ ಸಂಘಟನೆ ಸಂಸ್ಥಾಪಕ, ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮೀ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ದಿನಾಂಕ:02.10.2018ರಂದು ಬಳ್ಳಾರಿ ಜಿಲ್ಲಾ ಘಟಕದ ಆಶ್ರಯದಲ್ಲಿ ಬಳ್ಳಾರಿ ನಗರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನಂದರೇ, ರಾಜ್ಯದ ಔದ್ಯೋಗಿಕ ವಿಚಾರವಾಗಿ ಹಾಗೂ ಕನ್ನಡಿಗರ ಅಭಿವೃಧ್ಧಿಗೆ ಸಮೀತಿಯೊಂದನ್ನು ರಚಿಸಲಾಗಿತ್ತು.

      ಸಮೀತಿ ಕಾರ್ಯ ಶ್ಲಾಘನೀಯವಾಗಿರುವುದರಲ್ಲಿ ಸಂಶಯವೇ ಇಲ್ಲ. ಕಳೆದ ಸುಮಾರು ವರ್ಷಗಳ ಹಿಂದೆ ಸಮೀತಿಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಡಾ.ಸರೋಜಿನಿ ಮಹಿಷಿ ಎಂ.ಪಿ.ಅವರ ನೇತೃತ್ವದಲ್ಲಿ ಕರ್ನಾಟಕದ ವಿದ್ಯಾವಂತ, ಅನಕ್ಷರಸ್ಥ ಕನ್ನಡಿಗರ ಔದ್ಯೋಗಿಕ ಸಮಸ್ಯೆಯನ್ನು ಪರಿಹರಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂಬ ವಿಷಯವನ್ನು ಸಮೀತಿ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಈ ವರದಿಯು ಸರ್ಕಾರಕ್ಕೆ ಸಲ್ಲಿಸಿ ಸುಮಾರು ವರ್ಷಗಳು ಕಳೆದರೂ ಇಲ್ಲಿವರೆಗೂ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅನುಷ್ಠಾನಕ್ಕೆ ತಂದಿಲ್ಲ. ರಾಜ್ಯದ ಕನ್ನಡಿಗರಿಗೆ ನ್ಯಾಯ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿರುವುದು ಕಣ್ಣಿಗೆ ಕಾಣಿಸುತ್ತಿದೆ.

     ರಾಜ್ಯದ ನೆಲ, ಜಲ, ವಿದ್ಯುತ್ ಸೇರಿದಂತೆ ನಾನಾ ಸೌಲಭ್ಯಗಳನ್ನು ಬಳಸಿಕೊಂಡಿರುವ ಕಂಪನಿಗಳು, ಖಾಸಗಿ ಸಂಸ್ಥೆಗಳು, ಪರ ರಾಷ್ಟ್ರದ ಬ್ಯಾಂಕ್‍ಗಳು, ಖಾಸಗಿ ಉದ್ಯಮಗಳು, ರಾಜ್ಯದ ಸರ್ಕಾರದ ಸೌಲತ್ತುಗಳನ್ನು ಪಡೆದು ಅವರ ಕಂಪನಿಗಳ ಉದ್ಯಮಗಳ ಹೆಸರುಗಳನ್ನು ಬೆಳೆಸಿಕೊಂಡು ವ್ಯವಹಾರ ನಡೆಸುತ್ತಾ ಅಟ್ಟಹಾಸ ಮೆರೆಯುತ್ತಿದ್ದಾರೆ. ಇವರು, ಕರ್ನಾಟಕದ ಕನ್ನಡಿಗರನ್ನು ಮರೆತು ಉನ್ನತ ಹುದ್ದೆಗಳನ್ನು ಪರ ರಾಜ್ಯದವರಿಗೆ ನೀಡಿದ್ದು, ರಾಜ್ಯದ ಜನರ ಮೇಲೆ ಅಧಿಕಾರ ಚಲಾಯಿಸುತ್ತಿದ್ದಾರೆ. ಈ ಕುರಿತು ಸರ್ಕಾರದ ಗಮನಕ್ಕಿದ್ದರೂ ಇಲ್ಲಿವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ವಿಷಾಧನೀಯ.

     ಕರ್ನಾಟಕದ ಸಮಗ್ರ ಕನ್ನಡಿಗರ ಗೌರವ ಬೆಳೆಸುವ ಔದ್ಯೋಗಿಕ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿರುವ ಡಾ.ಸರೋಜಿನಿ ಮಹಿಷಿ ವರದಿಯನ್ನು ಪ್ರಸ್ತುತ ಸರ್ಕಾರವಾದರೂ ಸಮರ್ಪಕವಾಗಿ ಅನುಷ್ಠಾನಗೊಳಿ, ಕನ್ನಡಿಗರಿಗೆ ಆಗುತ್ತಿರುವ ಅವಮಾನ, ಅನ್ಯಾಯವನ್ನು ತಡೆಗಟ್ಟುವ ರೀತಿಯಲ್ಲಿ ಕೂಡಲೇ ಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ.

     ಇದರ ಜೊತೆಗೆ ಉತ್ತರ ಕರ್ನಾಟಕದ ಸಮಗ್ರ ಅಭಿವೃಧ್ಧಿಗಾಗಿ ಕೂಡಾ ಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಉತ್ತರ ಕರ್ನಾಟಕದ ಸಮಗ್ರ ಅಭಿವೃಧ್ಧಿಗಾಗಿ ನಮ್ಮ ಸಂಘಟನೆಯಿಂದ ವಿವಿಧ ಬೇಡಿಕೆಗಳು, ಹಕ್ಕೊತ್ತಾಯಗಳ ಜೊತೆಯಲ್ಲಿ ತಮ್ಮ ಮುಂದೆ ಮಂಡಿಸುತ್ತಿದ್ದೇವೆ.

      ಈ ಕುರಿತು ತಾವುಗಳು ಕೂಡಲೇ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಮ್ಮ ಸಂಘಟನೆ ವತಿಯಿಂದ ಮನವಿ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ನ್ಯಾಯಯುತ ಬೇಡಿಕೆಗಳ ಕುರಿತು ವಿಳಂಬ ನೀತಿ ಅನುಸರಿಸಿದರೇ ಬರುವ ದಿನಗಳಲ್ಲಿ ಸಂಘಟನೆ ವತಿಯಿಂದ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಮ್ಮಲ್ಲಿ ವಿನಯ ಪೂರ್ವಕವಾಗಿ ತಿಳಿಸುತ್ತಿದ್ದೇವೆ.

ಬೇಡಿಕೆಗಳು

1. ಡಾ.ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
2. ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃಧ್ಧಿಗೆ ಮೊದಲ ಆದ್ಯತೆ ನೀಡಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು.
3. ಉತ್ತರ ಕರ್ನಾಟಕ ಭಾಗದ ರೈತರಿಗೆ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕು. ಕೃಷ್ಣಾ ನದಿ ಜೋಡಣೆ ಮಾಡಲು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
4. ದೇಶಕ್ಕೆ ಅನ್ನ ನೀಡುವ ರೈತರ ಎಲ್ಲ ಸಾಲಗಳನ್ನು ಮನ್ನಾ ಮಾಡಬೇಕು. ಅತಿವೃಷ್ಠಿ ಹಾಗೂ ಅನಾವೃಷ್ಠಿಯಿಂದ ಬೆಳೆ ನಾಶವಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು.
5. ಹೈ.ಕ.ಭಾಗದ ಅಭೀವೃಧ್ಧಿಗೆ ಪೂರಕವಾಗಿರುವ 371(ಜೆ) ಕಲಂ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.
6. ಹೈ.ಕ.ಭಾಗದ ಅಭಿವೃಧ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು ಹಾಗೂ ಸಮರ್ಪಕ ಬಳಕೆಗೆ ಮುಂದಾಗಬೇಕು, ಈ ಕುರಿತು ತಾವು ಅದಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಬೇಕು.
7. ಬಳ್ಳಾರಿಯ ಹಗರಿ ಕೃಷಿ ವಿಶ್ವವಿದ್ಯಾಲಯಕ್ಕೆ ಹಸಿರು ಕ್ರಾಂತಿ ಹರಿಕಾರ ದೇಶದ ಉಪ ಪ್ರಧಾನ ಮಂತ್ರಿ ದಿವಂಗತ ಡಾ. ಬಾಬು ಜಗಜೀವನ್ ರಾಮ್ ಅವರ ಹೆಸರನ್ನು ನಾಮಕರಣ ಮಾಡಬೇಕು.
8. ವೈದ್ಯಕೀಯ ಸಮಸ್ಯೆ ನೀಗಿಸಲು ಉನ್ನತವಾದ ಯಂತ್ರೋಪಕರಣಗಳನ್ನು ಹೆಚ್ಚಿಸಬೇಕು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಸ್ಥಳಗಳಲ್ಲಿ ವೈದ್ಯರನ್ನು ಕೂಡಲೇ ನೇಮಿಸಬೇಕು.
9. ರಾಜ್ಯದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ ಉನ್ನತ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.
10. ಒಂದೇ ಸ್ಥಳದಲ್ಲಿ ಸುಮಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಹಾಗೂ ಆ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಬೇಕು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ   

Recent Articles

spot_img

Related Stories

Share via
Copy link
Powered by Social Snap