ಗುಬ್ಬಿ
ಆದಿಕವಿ ಶ್ರೀಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಸಾಮಾಜಿಕ ಬದುಕಿನಲ್ಲಿ ಅಳವಡಿಸಿಕೊಂಡಾಗ ಆದರ್ಶ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಎಸ್.ಆರ್.ರುದ್ರೇಶ್ ತಿಳಿಸಿದರು.
ತಾಲ್ಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಶ್ರೀಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಲ್ಮೀಕಿಯವರು ರಚಿಸಿದ ರಾಮಾಯಣ ವಿಶ್ವ ವಿಖ್ಯಾತವಾದುದಾಗಿದ್ದು ಅವರ ತತ್ವಾದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ಸಾಮಾಜಿಕ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸುಸಂಸ್ಕøತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.
ಆಧುನಿಕತೆ ಬೆಳೆದಂತೆ ವಿದ್ಯಾರ್ಥಿಗಳಲ್ಲಿ ನಮ್ಮ ಕವಿಗಳು ಮತ್ತು ಸಾಹಿತಿಗಳ ಬಗ್ಗೆ ಸಮಗ್ರವಾದ ಮಾಹಿತಿ ಮತ್ತು ಮಾರ್ಗದರ್ಶನಗಳ ಅವಶ್ಯಕತೆ ಇದ್ದು ಅವುಗಳನ್ನು ಮಹಾತ್ಮರ ಜಯಂತಿ ಆಚರಣೆ ಮೂಲಕ ಕಲಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಅಧ್ಯಾಪಕ ಬಿ.ಮಹಾಲಿಂಗಯ್ಯ ಮಾತನಾಡಿ ಶ್ರೀಮಹರ್ಷಿ ವಾಲ್ಮೀಕಿಯವರು ರಚಿಸಿ ರಾಮಾಯಣ ಮಹತ್ವ ಪೂರ್ಣವಾದುದಾಗಿದ್ದು, ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಸಾಮಾಜಿಕ ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದ ಅವರು, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾಲ್ಮೀಕಿ ರಾಮಾಯಣ ಮಹತ್ವ ಪೂರ್ಣವಾದುದಾಗಿದೆ ಎಂದು ತಿಳಿಸಿದರು.
ಸಮಾಜಕ್ಕೆ ಮಹತ್ವದ ಕೊಡುಗೆಗಳನ್ನು ನೀಡುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ದಾರ್ಶನಿಕರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ನೀಡುವಂತಹ ಮಹತ್ವ ಪೂರ್ಣ ಕಾರ್ಯಕ್ರಮಗಳನ್ನು ಇಂದಿನ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರುಗಳಾದ ಶಿಕ್ಷಕ ಎನ್.ಹೆಚ್.ಗಿರಿರಾಜು, ಎನ್.ಆರ್.ನಟರಾಜು, ಸಿ.ರಮೇಶ್, ಎ.ಎಲ್.ಪ್ರಸನ್ನ, ಸಂಜೀವಯ್ಯ, ಜಯಶ್ರೀಯಂಡೀಗೇರಿ, ಸಿ.ಚೇತನ ಮುಂತಾದವರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








