ಬೆಂಗಳೂರು-
ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಜನರ ಪಾತ್ರವೂ ಮುಖ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸೋಶಿಯಲ್ ಮೀಡಿಯ ಕಾನ್ ಕ್ಲೇವ್‍ನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳು ಸೂಕ್ತವಾಗಿ ಸದ್ಬಳಕೆಯಾಗಿ ಜನರಿಗೆ ತಲುಪುವಂತಾಗಬೇಕು ಎಂದು ಹೇಳಿದರು.
ಏನಾದರೂ ಮಾಡಿಕೊಳ್ಳಲಿ ಎಂದು ನಿರ್ಲಿಪ್ತರಾಗಿ ಸುಮ್ಮನೆ ಜನರು ಕೂರಬಾರದು. ದೇಶ ವೇಗವಾಗಿ ಬೆಳೆಯುತ್ತಿದೆ. ಸಾಕಷ್ಟು ಅಭಿವೃದ್ಧಿಯೂ ಆಗುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಜನರ ಸಹಕಾರವು ಅಗತ್ಯ ಎಂದರು.
ಸಂಸದರ ಆದರ್ಶ ಗ್ರಾಮ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮೂಲಕ ಗ್ರಾಮೀಣಾಭಿವೃದ್ದಿ ಮಾಡಲಾಗುತ್ತಿದೆ. ಈಗ ರೋಗಗ್ರಸ್ಥವಾಗಿರುವ ಪ್ರದೇಶಗಳಿಲ್ಲ. ಎಲ್ಲ ಪ್ರದೇಶಗಳು ಅಭಿವೃದ್ದಿಯಾಗುತ್ತಿವೆ ಎಂದು ಹೇಳಿದರು.
ಆಯಾ ಲೋಕಸಭಾ ಕ್ಷೇತ್ರದ ಸಂಸದರೇ ಆದರ್ಶ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಮ್ಮ ಶಕ್ತಿ ಸಾಮಥ್ರ್ಯವನ್ನು ಬಳಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ