ಮೈತ್ರಿ ಕುರಿತು ಮಹತ್ವದ ಮಾತುಕತೆ

ಬೆಂಗಳೂರು:

      ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಕುರಿತು ಕಾಂಗ್ರೆಸ್ ನಾಯಕರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜತೆ ಮಹತ್ವದ ಮಾತುಕತೆ ನಡೆಸಿದರು.

       ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಕಾಂಗ್ರೆಸ್ ಮುಖಂಡರು ತಾತ್ವಿಕವಾಗಿ ಸಮ್ಮತಿಸಿದ್ದಾರೆ. ಹೈಕಮಾಂಡ್ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಕಾಂಗ್ರೆಸ್ ನಾಯಕರು ಗೌಡರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

      ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್‍ಖಂಡ್ರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುನಾದನ್, ಯಶೋಮತಿ ಠಾಕೋರ್, ಮಧುಯಕ್ಷಿಗೌಡ್, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಮತ್ತಿರರು ಕೆಪಿಸಿಸಿ ಕಚೇರಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು.

     ಅಲ್ಲಿ ಮಂಡ್ಯ, ರಾಮನಗರ ಕ್ಷೇತ್ರಗಳನ್ನು ಈ ಮೊದಲು ಕೊಟ್ಟ ಮಾತಿನಂತೆ ಜೆಡಿಎಸ್‍ಗೆ ಬಿಟ್ಟುಕೊಡಬೇಕು ಎಂಬ ನಿರ್ಣಯಗಳಾಯಿತು. ಬಳ್ಳಾರಿ ಮತ್ತು ಜಮಖಂಡಿ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡು ಸ್ಪರ್ಧಿಸುವುದು ಎಂಬ ಅಭಿಪ್ರಾಯ ಕೇಳಿ ಬಂತು.

     ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕುವುದು ಎಂಬ ನಿಲುವನ್ನು ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಲು ಜೆಡಿಎಸ್ ಕೂಡ ಬೇಡಿಕೆ ಮುಂದಿಟ್ಟಿದೆ. ಹೀಗಾಗಿ ದೇವೇಗೌಡರ ಜತೆ ಎಲ್ಲಾ ಕಾಂಗ್ರೆಸ್ ರಾಜ್ಯ ನಾಯಕರು ಕುಮಾರ ಕೃಪ ಅತಿಥಿ ಗೃಹದಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದರು.

     ಎರಡು ಪಕ್ಷಗಳ ನಾಯಕರು ಚರ್ಚೆ ಮಾಡಿ ಸರ್ವಸಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಯಾವುದೇ ಭಿನ್ನಮತಗಳಿಗೆ ಅವಕಾಶ ನೀಡದಂತೆ ಎಚ್ಚರ ವಹಿಸಿ, ಶತಾಯಗತಾಯ ಮಿತ್ರ ಕೂಟಗಳೇ ಗೆದ್ದುಕೊಳ್ಳಲು ರಣವ್ಯೂಹ ರಚಿಸಲಾಯಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap