ಹಾವೇರಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ ಪ್ರಸ್ತುತ ರಾಜ್ಯ ಸರ್ಕಾರ ನೂರು ದಿನ ಪೂರೈಸಿ ಮುನ್ನಡೆದಿದ್ದು ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ನೆರೆ ಸಂತ್ರಸ್ಥರಿಗೆ ಸರ್ಕಾರದ ಸ್ಪಂದನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜ, ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಅವರು ಜಂಟಿಯಾಗಿ ಚಾಲನೆ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಎನ್.ತಿಪ್ಪೇಸ್ವಾಮಿ, ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ್, ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿ.ಟಿ.ಓ ಮುಂಜುಮದಾರ್ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಛಾಯಾಚಿತ್ರ ವೀಕ್ಷಿಸಿದರು. ಅತೀವೃಷ್ಟಿ ಹಾಗೂ ನೆರೆಯಿಂದ ಸಂತ್ರಸ್ಥರಾದ ಜನರಿಗೆ ಸರ್ಕಾರದ ಪರಿಹಾರ ಕಾರ್ಯಗಳು,
ಮುಖ್ಯಮಂತ್ರಿಗಳ ಸ್ಪಂದನೆ ಒಳಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳಾದ ನೇಕಾರರ ಹಾಗೂ ಮೀನುಗಾರರ ಸಾಲಮನ್ನಾ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಕೊಡುಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಅಭಿವೃದ್ಧಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಕಾರ್ಮಿಕ ಇಲಾಖೆಯ ಅಭಿವೃಧ್ದಿ ಯೋಜನೆಗಳು, ಪ್ರವಾಸೋದ್ಯಮಕ್ಕೆ ಉತ್ತೇಜನ, ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ, ಕೈಗಾರಿಕೆಗಳ ಉತ್ತೇಜನ, ಕಲ್ಯಾಣ ಕರ್ನಾಟಕ ಪರ್ವಕ್ಕೆ ಚಾಲನೆ, 2020 ಏಪ್ರಿಲ್ 26 ಹಾಗೂ ಮೇ 24 ರಂದು ಧಾರ್ಮಿಕ ದತ್ತಿ ಇಲಾಖೆಯ 100 ಪ್ರವರ್ಗ ಎ ದೇವಾಲಯಗಳಲ್ಲಿ ಜರುಗುವ ಸಾಮೂಹಿಕ ವಿವಾಹ ಕಾರ್ಯಕ್ರಮ, ಹಾಗೂ ಸರ್ಕಾರದ ಸುಸ್ಥಿರ ಅಭಿವೃದ್ಧಿ ಗುರಿಗಳ ಮಾಹಿತಿಗಳನ್ನು ಛಾಯಾಚಿತ್ರಗಳು ಸಾರ್ವಜನಿಕರಿಗೆ ಮಾಹಿತಿಯೊಂದಿಗೆ ಗಮನೆಸೆಳೆಯುತ್ತವೆ.
ಇದೇ ಸಂದರ್ಭದಲ್ಲಿ ಸರ್ಕಾರದ ನೂರು ದಿನಗಳ ಸಾಧನೆಯ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ವಸ್ತು ಪ್ರದರ್ಶನ ಮಳಿಗೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತಾದ ಕಿರುಚಿತ್ರ ಪ್ರದರ್ಶನ ಆಯೋಜಿಸಲಾಗಿದೆ. ಈ ಛಾಯಾಚಿತ್ರ ಪ್ರದರ್ಶನವನ್ನು ಡಿಸೆಂಬರ್ 30ರವರೆಗೆ ಹಾವೇರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ.