ಬೆಂಗಳೂರು
ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಧನಸಹಾಯ ನೀಡುವ ಪ್ರಬುದ್ಧ ಯೋಜನೆಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. 2001ರಿಂದ ಈ ಕಾರ್ಯಕ್ರಮ ಪ್ರಾರಂಭವಾಗಿದ್ದು, 197 ವಿದ್ಯಾರ್ಥಿಗಳು ವಿದೇಶದಲ್ಲಿ ಶಿಕ್ಷಣ ಪಡೆದಿದ್ದಾರೆ. ಈ ಪೈಕಿ 78 ವಿದ್ಯಾರ್ಥಿಗಳು ಅಮೆರಿಕಾ ದೇಶವನ್ನೇ ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಗಿಸಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಇತರೆ ರಾಷ್ಟ್ರಗಳಿಗೂ ಕಳುಹಿಸಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಈ ಯೋಜನೆಗಾಗಿ ಸರ್ಕಾರ 120ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದು, ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪುಸ್ತಕ, ವಾಸ್ತವ್ಯ ವೆಚ್ಚ ಮತ್ತಿತರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ