ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ:ಚಿದಂಬರಂ

ಬೆಳಗಾವಿ

          ದೇಶದಲ್ಲಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ರೈತರ ಸಾಲಮನ್ನಾ ನಿರ್ಧಾರ ಸರಿಯಾಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸಮರ್ಥಿಸಿಕೊಂಡಿದ್ದಾರೆ.ನಗರದ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ರೈತರು ಅತಿವೃಷ್ಟಿ, ಅನಾವೃಷ್ಟಿಯಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 108 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಸಾಲಮನ್ನಾ ಮಾಡಲಾಗಿದೆ ಎಂದು ಪಿ.ಚಿದಂಬರಂ ಹೇಳಿದರು.

          ಕೇಂದ್ರ ಬಿಜೆಪಿ ಸರ್ಕಾರದ ನೋಟು ಅಮಾನ್ಯೀಕರಣ ನಿರ್ಧಾರದಿಂದ ಸಣ್ಣ ಹಾಗೂ ಮಧಯಮ ವ್ಯಾಪಾರಸ್ಥರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ದೇಶದ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಆರೋಪಿಸಿದರು.ಕಾಂಗ್ರೆಸ್‍ನ ಸಜ್ಜನಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕುರಿತು ಮಾತನಾಡಿದ ಅವರು, 1984ರ ಸೀಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಕ್ಷಮೆಯಾಚನೆ ಮಾಡಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿದ ನ್ಯಾಯಾಲಯದ ಕ್ರಮ ಸ್ವಾಗತಾರ್ಹ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap