ಚಿತ್ರದುರ್ಗ:
ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಪುಣ್ಯದಿನ ಹಾಗೂ ಸರ್ದಾರ್‍ವಲ್ಲಭಾಯಿ ಪಟೇಲ್‍ರವರ ಜನ್ಮದಿನವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಚರಿಸಲಾಯಿತು.
ಇಂದಿರಾಗಾಂಧಿರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ಬ್ಯಾಂಕ್‍ಗಳನ್ನು ರಾಷ್ಟ್ರೀಕರಣಗೊಳಿಸಿ ಬಡವರು ಬ್ಯಾಂಕ್‍ಗಳಲ್ಲಿ ವ್ಯವಹರಿಸುವಂತ ಅನುಕೂಲವನ್ನು ಒದಗಿಸಿಕೊಟ್ಟವರು ಇಂದಿರಾಗಾಂಧಿ. ದೇಶದ ಪ್ರಧಾನಿಯಾಗಿ ಅವರು ಅಧಿಕಾರ ಸ್ವೀಕರಿಸಿದಾಗ ಕಡುಬಡತನವಿತ್ತು. ಹೊರದೇಶಗಳಿಂದ ಆಹಾರ ಧಾನ್ಯಗಳನ್ನು ತರಿಸಿ ಬಡವರಿಗೆ ವಿತರಿಸಿದ ಕೀರ್ತಿ ಅವರಿಗೆ ಸಲ್ಲಬೇಕು ಎಂದು ಗುಣಗಾನ ಮಾಡಿದರು.
ಗರೀಬಿ ಹಠಾವೋ, ಇಪ್ಪತ್ತು ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದು ಇಂದಿರಾಗಾಂಧಿರವರು ಅಧಿಕಾರದ ಕೊನೆಯ ಕ್ಷಣದವರೆಗೂ ದೇಶಕ್ಕಾಗಿ ಸೇವೆಸಲ್ಲಿಸಿ ಪ್ರಾಣತ್ಯಾಗ ಮಾಡಿದರು. ಪಕ್ಷ ಸಂಘಟಿಸಿ ದೇಶವನ್ನು ಬಲಪಡಿಸಬೇಕೆಂಬುದೊಂದೆ ಅವರ ಉದ್ದೇಶವಾಗಿತ್ತು. ಹಾಗಾಗಿ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕೋಮುವಾದಿ ಬಿಜೆಪಿ.ಯನ್ನು ತೊಲಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಕೆಲಸ ಮಾಡಬೇಕು ಎಂದು ಹೇಳಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ನಗರಸಭೆ ಸದಸ್ಯೆ ಪಿ.ಕೆ.ಮೀನಾಕ್ಷಿ ಮಾತನಾಡುತ್ತ ಪುರುಷ ಪ್ರಧಾನ ಸಮಾಜದಲ್ಲಿ ಇಂದಿರಾಗಾಂಧಿ ದೇಶದ ಪ್ರಧಾನಿಯಾಗಿ ಅನೇಕ ಸವಾಲುಗಳನ್ನು ಎದುರಿಸಿ ದೇಶವನ್ನು ಮುನ್ನಡೆಸಿಕೊಂಡು ಹೋದರು. ಅವರು ಹಾಕಿಕೊಟ್ಟ ಮಾರ್ಗದರ್ಶನದ ಮೇಲೆ ಇಂದು ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ದೇಶದಲ್ಲಿ ಅಧಿಕಾರಕ್ಕೆ ತರಬೇಕು. ಅದೇ ರೀತಿ ಉಕ್ಕಿನ ಮನುಷ್ಯ ಎಂದೆ ಖ್ಯಾತಿಗಳಿಸಿದ್ದ ಸರ್ದಾರ್ ವಲ್ಲಭಾಯಿ ಪಟೇಲ್‍ರವರಂತಹ ದೇಶಭಕ್ತಿಯನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಆರ್.ಕೆ.ನಾಯ್ಡು, ಎಂ.ಕೆ.ತಾಜ್‍ಪೀರ್, ಅಜ್ಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಬಿ.ಜಿ.ಶ್ರೀನಿವಾಸ್, ಕಾರ್ಯದರ್ಶಿ ಹೆಚ್.ಶಬ್ಬೀರ್‍ಭಾಷ, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಜಿ.ಮನೋಹರ್, ಪ್ರೊಫೆಷನಲ್ ವಿಭಾಗದ ಅಧ್ಯಕ್ಷ ಮಹಡಿ ಶಿವಮೂರ್ತಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯೆ ಮೋಕ್ಷರುದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಆರತಿ ಮಹಡಿ ಶಿವಮೂರ್ತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಚಾಂದ್‍ಪೀರ್, ಜಿಲ್ಲಾ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ಅಶ್ರಫ್‍ಆಲಿ ಇನ್ನು ಮುಂತಾದವರು ಪುಣ್ಯತಿಥಿಯಲ್ಲಿ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
