ಚಳ್ಳಕೆರೆ
ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಟೀಪ್ಪು ಸುಲ್ತಾನ್ ಜಯಂತಿ ಆಚರಿಸಲು ಈಗಾಗಲೇ ನಿರ್ಧರಿಸಿದ್ದು, ನ.10ರ ಶನಿವಾರ ಇಲ್ಲಿನ ಸರ್ಕಾರ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಟೀಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಜಾಗೃತೆ ವಹಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿಗಳು ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಅಡಚಣೆಯಾಗದಿರಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರ ಪಥಸಂಚಲವನ್ನು ನಡೆಸಿದರು.
ಡಿವೈಎಸ್ಪಿ ಎಸ್.ರೋಷನ್ ಜಮೀರ್ ಈ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿ, ಜಿಲ್ಲಾಡಳಿತ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ರೀತಿಯ ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ. ಅದೇ ರೀತಿ ಎಲ್ಲಿಯೂ ಸಹ ಟಿಪ್ಪು ಜಯಂತಿ ಆಚರಣೆಯ ಬಗ್ಗೆ ಬ್ಯಾನರ್, ಕಟೌಟ್‍ಗಳಾಗಲಿ ಕಟ್ಟುವಂತಿಲ್ಲ. ಅದ್ದರಿಂದ ಜಯಂತಿ ಆಚರಣೆಗೆ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಜಾಗೃತೆ ವಹಿಸಲು ಸುಮಾರು 200ಕ್ಕೂ ಹೆಚ್ಚು ಪೊಲೀಸರ ಪಥಸಂಚಲನವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಸಲಾಗಿದೆ ಎಂದರು.
ವೃತ್ತ ನಿರೀಕ್ಷ ಎನ್.ತಿಮ್ಮಣ್ಣ ಮಾತನಾಡಿ, ಚಳ್ಳಕೆರೆ ವೃತ್ತ ವಿಭಾಗದ ಎಲ್ಲಾ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗವನ್ನು ಪಥಸಂಚಲನ ಕಾರ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ. ಪೊಲೀಸರ ಪಥಸಂಚಲನ ಕಾರ್ಯಕ್ರಮವನ್ನು ಯಶಸ್ಸಿಯಾಗಿ ನಡೆಸಬೇಕೆಂಬ ಉದ್ದೇಶದಿಂದ ಮಾತ್ರ. ಅದರೆ ಈ ಬಗ್ಗೆ ಯಾವುದೇ ರೀತಿಯ ಆತಂಕ ಯಾರಿಗೂ ಬೇಡ. ಇದು ಜಿಲ್ಲಾ ರಕ್ಷಣಾಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪಥಸಂಚಲನ ನಡೆಸಲಾಗಿದೆ. ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದರು. ಪಿಎಸ್‍ಐಗಳಾದ ಕೆ.ಸತೀಶ್‍ನಾಯ್ಕ, ಮೋಹನ್‍ಕುಮಾರ್, ಲೋಕೇಶ್ ಹಾಗೂ ಸಿಬ್ಬಂದಿ ವರ್ಗ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಬ್ಯಾನರ್ ತೆಗೆಸಿದ ಪೊಲೀಸರು :- ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಟಿಪ್ಪು ಅಭಿಮಾನಿ ಸಂಘದಿಂದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಲು ಮಾಡಿದ್ದ ಮನವಿಯ ಬ್ಯಾನರ್‍ಗಳನ್ನು ಪೊಲೀಸ್ ಅಧಿಕಾರಿಗಳು ತೆರವುಗೊಳಿಸಿದರು. ಅಸಮದಾನಗೊಂಡ ಟಿಪ್ಪು ಸುಲ್ತಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪಿ.ಬಷೀರ್ ಹಯಾತ್, ಉಪಾಧ್ಯಕ್ಷ ಟಿ.ಜೆ.ತಿಪ್ಪೇಸ್ವಾಮಿ, ಮುಜೀಬ್, ಖಾದರ್, ನಭಿ, ಜುಬೇರ್, ಜಾಕೀರ್ ಮುಂತಾದವರು ಶಾಸಕರನ್ನು ಭೇಟಿ ಮಾಡಿ ಅನುಮತಿಗೆ ಪ್ರಾರ್ಥಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
