ಬೆಂಗಳೂರು
ಬಿಡದಿಯ ಖಾಸಗಿ ರೆಸಾರ್ಟ್‍ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಗಣೇಶ್ ಅವರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪಕ್ಷದಿಂದ ಆಂತರಿಕ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿಯು ಈಗಾಗಲೇ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಸಚಿವರು, ಶಾಸಕರಿಂದ ಮಾಹಿತಿ ಸಂಗ್ರಹಿಸಲು ಬಜೆಟ್ ತಯಾರಿ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪೆÇಲೋ ಆಸ್ಪತ್ರೆಗೆ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಸಚಿವ ಕೃಷ್ಣ ಬೈರೇಗೌಡ ಭೇಟಿ ನೀಡಿ ಆನಂದ್ ಅವರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಗಣೇಶ್ ಅವರಿಂದಲೂ ಮಾಹಿತಿ ಪಡೆಯಬೇಕಿದೆ. ಜೊತೆಗೆ ಶಾಸಕರಿಂದ ಮಾಹಿತಿ ಸಂಗ್ರಹಿಸಿ ತನಿಖಾ ವರದಿಯನ್ನು ಕೆಪಿಸಿಸಿಗೆ ಸಲ್ಲಿಸಲಿದೆ ಎಂದರು.
ಕೆಪಿಸಿಸಿ ತನಿಖಾ ತಂಡ, ತನಿಖೆ ನಡೆಸಿ ವರದಿ ಸಲ್ಲಿಸಲು ವಿಳಂಬ ಧೋರಣೆ ಅನುಸರಿಸುತ್ತಿದೆ ಎಂಬ ಆರೋಪವನ್ನು ಅಲ್ಲಗಳೆದ ದಿನೇಶ್ ಗುಂಡೂರಾವ್ , ಶಾಸಕರ ರಕ್ಷಣೆ ಮಾಡಲು ವರದಿ ತಡವಾಗುತ್ತಿದೆ ಎನ್ನುವುದು ಸುಳ್ಳು ಎಂದು ಸ್ಪಷ್ಟಪಡಿಸಿದೆ.ತನಿಖಾ ತಂಡದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಕೃಷ್ಣಬೈರೇಗೌಡ ಹಾಗೂ ಕೆ.ಜೆ.ಜಾರ್ಜ್ ಇದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
