ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು

      ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡುವ ಮೂಲಕ ಮನುಷ್ಯನ ಆರೋಗ್ಯ ಉತ್ತಮವಾಗಲಿದೆ ಎಂದು ಎಸ್ ಡಿಎಸ್ ಕ್ಷಯರೋಗ ಸಂಶೋಧನಾ ಕೇಂದ್ರ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ ನಿರ್ದೇಶಕ ಡಾ.ಸಿ.ನಾಗರಾಜು ಅವರು ತಿಳಿಸಿದ್ದಾರೆ.

      ನಗರದ ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಪ್ರತಿ ಮಾಹೆಯ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗಲಿರುವುದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ತಮ್ಮ ಸುತ್ತ-ಮುತ್ತಲ ಪರಿಸರವನ್ನು ಉತ್ತಮವಾಗಿಟ್ಟುಕೊಳ್ಳಬೇಕು ಎಂದರು.

      ಪರಿಸರದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಜನರು ತಮ್ಮ ಮನೆಯ ಮುಂದೆ ತಾವೇ ಕಸವನ್ನು ಹಾಕಿ ಅನೈರ್ಮಲ್ಯ ವಾತಾವರಣ ನಿರ್ಮಾಣ ಮಾಡುತ್ತಿದ್ದು, ಸಾಂಕ್ರಾಮಿಕ ಕಾಯಿಲೆ ಹರಡಲು ದಾರಿ ಮಾಡುತ್ತಿದ್ದಾರೆ. ಇದು ನಿಲ್ಲಬೇಕು. ಪ್ರತಿಯೊಬ್ಬರು ಪರಿಸರ ಸ್ವಚ್ಛತೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.

      ಸ್ವಚ್ಛ ಭಾರತ ಯೋಜನೆಯಡಿ ಸಾಕಷ್ಟು ಸಾಧನೆ ಮಾಡಬೇಕಾಗಿದೆ. ಸ್ವಚ್ಛತೆಯಿಂದ ಸಾವಿನ ಸಂಖ್ಯೆ ಕಡಿಮೆ ಆಗುತ್ತದೆ. ಪ್ರತಿಯೊಬ್ಬರು ವೈಯಕ್ತಿಕ ಶೌಚಾಲಯ ಬಳಸಬೇಕು. ಮಕ್ಕಳು ಕೂಡ ಶಿಕ್ಷಣ ಪಡೆಯುವ ಜೊತೆಯಲ್ಲಿ ಸ್ವಚ್ಛತೆ ಬಗ್ಗೆ ಅರಿವು ಪಡೆದು ಸಮಾಜದ ಒಳಿತಾಗಿ ಕೆಲಸ ಮಾಡಬೇಕು ಎಂದರು.

      ಸ್ವಚ್ಛತೆ ಕಾಪಾಡುವ ಮನೋಭಾವನೆ ಎಲ್ಲರಲ್ಲಿಯೂ ಮೂಡಬೇಕು. ಮನೆ ಮತ್ತು ಮನೆಯ ಸುತ್ತ ಸ್ವಚ್ಛತೆ ಇದ್ದರೇ ದೇಶವೇ ಸ್ವಚ್ಛವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿ ತಿಂಗಳು, ಆಸ್ಪತ್ರೆ ವೈದ್ಯಕೀಯ ಅಧಿಕಾರಿಗಳು, ಎಲ್ಲಾ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ರಂಗಕರ್ಮಿ ಆ.ಶ್ರೀನಿವಾಸ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap