ಬರ ಪರಿಸ್ಥಿತಿ ಸರಿಯಾಗಿ ನಿರ್ವಹಿಸಿ: ಕೃಷ್ಣ ಭೈರೇಗೌಡ

ಬೆಂಗಳೂರು

        ಕೋಲಾರ ಜಿಲ್ಲೆಯ ಬರಪರಿಸ್ಥಿತಿ ಪರಿಹಾರ ಕ್ರಮಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಕೋಲಾರದಲ್ಲಿಂದು ಸಭೆ ನಡೆಸಿದರು.

         ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಕ್ಷಣವೇ ಲಾರಿಗಳ ಮೂಲಕ ನೀರು ಪೂರೈಸಬೇಕು, ಅಗತ್ಯವಿರುವ ಕಡೆ ಬೋರ್‍ವೆಲ್‍ಗಳನ್ನು ಕೊರೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋಲಾರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಸೇರಿದಂತೆ ಜಿಲ್ಲೆಯ ಮುಖ್ಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link