ರಾಜ್ಯಪಾಲರಿಂದ ಮುಖ್ಯ ಕಾರ್ಯದರ್ಶಿಗೆ ಸೂಚನೆ..!!

ಬೆಂಗಳೂರು

      ರಾಜ್ಯದಲ್ಲಿ ಉಂಟಾಗಿರುವ ರಾಜಕೀಯದಲ್ಲಿ ಅಸ್ಥಿರತೆ ಹಿನ್ನೆಲೆಯಲ್ಲಿ ತುರ್ತು ಕೆಲಸಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಅವರು ಸೂಚಿಸಿದ್ದಾರೆ.

       ರಾಜ್ಯ ರಾಜಕೀಯವು ಅನಿಶ್ಚಿತತೆ ತಲುಪಿರುವುದರಿಂದ ಪ್ರಮುಖ ಕಾರ್ಯಕ್ರಮಗಳು ಯೋಜನೆಗಳಿಗೆ ಅನುಮೋದಿ ಸುವಂತಿಲ್ಲ . ಮುಖ್ಯಮಂತ್ರಿಗಳು ಸೇರಿದಂತೆ, ಸಚಿವರುಗಳು ಸಭೆ ಸೇರುವಂತಿಲ್ಲ ಎನ್ನುವ ಸೂಚನೆ ರಾಜ್ಯಪಾಲರು ನೀಡಿದ್ದಾರೆ ಎಂದು ತಿಳಿದುಬಂದಿದೆ.

        ರಾಜ್ಯ ರಾಜಕೀಯ ಅಸ್ಥಿರತೆ ಕುರಿತಂತೆ ಹಾಗೂ ದಿನನಿತ್ಯದ ಬೆಳವಣಿಗೆ ಕುರಿತಂತೆ, ಕೇಂದ್ರ ಗೃಹಸಚಿವಾಲಯಕ್ಕೆ ರಾಜ್ಯಪಾಲ ವಾಲಾ ಅವರು, ವರದಿ ನೀಡುತ್ತಿದ್ದಾರೆ ಎನ್ನುವ ಬೆನ್ನಹಿಂದೆಯೇ ರಾಜ್ಯಪಾಲರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳದಂತೆ, ಮಹತ್ವದ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

       ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‍ನಿಂದ 10 ಹಾಗೂ ಜೆಡಿಎಸ್‍ನಿಂದ ಮೂವರು ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರ ಸದ್ಯದ ಪರಿಸ್ಥಿತಿಯಲ್ಲಿ ಅಲ್ಪಮತಕ್ಕೆ ಕುಸಿದಿದೆ. ಈ ಸಂದರ್ಭದಲ್ಲಿ ಪ್ರಮುಖ ನಿರ್ಧಾರಗಳು ಬೇಡ ಎನ್ನುವ ಸೂಚನೆಯನ್ನು ರಾಜ್ಯಪಾಲರು ನೀಡಿದ್ದಾರೆ.

       ಮಂಗಳವಾರ ಅಂದರೆ, ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ನೀರಾವರಿ ನಿಗಮಗಳ ಸಭೆ ನಂತರ, ಹಲವು ಶಾಸಕರೊಂದಿಗೆ ಮುಖ್ಯಮಂತ್ರಿಗಳು ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದ್ದರು. ಈ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಜರಿದ್ದರು.

       ಅವರು ಕೃಷ್ಣ ಭಾಗ್ಯ ಜಲನಿಗಮ, ಕಾವೇರಿ ನಿಗಮ ಮತ್ತು ಕರ್ನಾಟಕ ನೀರಾವರಿ ನಿಗಮಗಳ ನಿರ್ದೇಶಕ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿದ್ದರು. ಇದಕ್ಕೂ ಮೊದಲು ಸೋಮವಾರ ಅಂದರೆ, ಜುಲೈ 8 ರಂದು ಮುಖ್ಯಮಂತ್ರಿ ಮಂಡ್ಯದ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕುರಿತಂತೆ ಸಭೆ ನಡೆಸಿದ್ದರು. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿದ್ದ ರಾಜ್ಯಪಾಲರು, ಸರ್ಕಾರ ಅನಿಶ್ಚಿತತೆ ತಲುಪಿರುವುದರಿಂದ ಪ್ರಮುಖ ನಿರ್ಧಾರಗಳು ಬೇಡ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap