ತುಮಕೂರು
ರಾಜ್ಯದಲ್ಲಿ ಕೊರೊನಾ ವೈರಸ್ ಇನ್ನೂ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಇದರಿಂದ ದೈನಂದಿನ ಕೆಲಸಕ್ಕೆ ತೊಂದರೆಯಾಗುತ್ತಿರುವುದನ್ನು ಮನಗಂಡಿರುವ ರಾಜ್ಯ ಹೈಕೋರ್ಟ್ ಎಲ್ಲ ನ್ಯಾಯಾಲಯಗಳಲ್ಲಿರುವ ಮಧ್ಯಂತರ ಆದೇಶಗಳನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಕೊರೊನಾ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಕೀಲರು ಹಾಗೂ ಕಕ್ಷಿದಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಹಮದ್ ಆರೀಫ್ ಜಮೀಲ್ ಮತ್ತಿತರರು ರಾಜ್ಯ ಹೈಕೋರ್ಟ್ ಗಮನ ಸೆಳೆದಿದ್ದರು. ಇವರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅರವಿಂದಕುಮಾರ್ ಅವರುಗಳಿದ್ದ ವಿಭಾಗೀಯ ಪೀಠವು ಸದ್ಯದ ಪರಿಸ್ಥಿತಿಯಲ್ಲಿ ಕಕ್ಷಿದಾರರ ಹಿತವನ್ನು ಕಾಯ್ದುಕೊಳ್ಳುವ ಅಗತ್ಯವಿದ್ದು, ಸೆಪ್ಟೆಂಬರ್ ಅಂತ್ಯದವರೆಗೆ ಮಧ್ಯಂತರ ಆದೇಶಗಳನ್ನು ವಿಸ್ತರಿಸಲು ಆದೇಶಿಸಿದ್ದಾರೆ.
ಈ ನಿಟ್ಟಿನಲ್ಲಿ ಈವರೆಗೆ ರಾಜ್ಯದ ವಿವಿಧ ನ್ಯಾಯಾಲಯಗಳು ನೀಡಿರುವ ಮಧ್ಯಂತರ ಆದೇಶಗಳನ್ನು ಮುಂದೂಡಲಾಗುತ್ತಿದೆ. ಜಿಲ್ಲಾ ನ್ಯಾಯಾಲಯ, ಸಿವಿಲ್, ಕೌಟುಂಬಿಕ, ಕಾರ್ಮಿಕ ನ್ಯಾಯಾಲಯ ಸೇರಿ ಎಲ್ಲ ನ್ಯಾಯಾಲಯಗಳೂ ಹೊರಡಿಸಿದ ಮಧ್ಯಂತರ ಆದೇಶಗಳಿಗೆ ಇದು ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ