ಇಂಗ್ಲೆಂಡ್ ನಲ್ಲಿ ಅಂತಾರಾಷ್ಟ್ರೀಯ ಕುರುಬ ಸಮಾವೇಶ : ಹೆಚ್ ಎಂ ರೇವಣ್ಣ

ಬೆಂಗಳೂರು:

    ಕುರುಬ ಸಮುದಾಯವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಸಂಘಟಿಸಲು ಪ್ರಯತ್ನ ಆರಂಭವಾಗಿದ್ದು, ಸೆಪ್ಟೆಂಬರ್ ನಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆಯಿಂದ ಇಂಗ್ಲೆಂಡ್ ನಲ್ಲಿ ಬೃಹತ್ ಮಟ್ಟದ ಅಂತಾರಾಷ್ಟ್ರೀಯ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ.

    ಕುರುಬ ಸಮುದಾಯ ಸಂಘಟನೆ ಕುರಿತು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಚ್. ವಿಶ್ವನಾಥ್, ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂನ್ ನಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಷ್ಟ್ರಮಟ್ಟದ ಕುರುಬ ಸಮಾವೇಶ ನಡೆಸಲಾಗುವುದು. ಇದಕ್ಕೂ ಮುನ್ನ ಎಲ್ಲಾ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಸಮುದಾಯವನ್ನು ಪರಿಣಾಮಕಾರಿಯಾಗಿ ಸಂಘಟನೆ ಮಾಡುವ ಕಾರ್ಯಯೋಜನೆ ರೂಪಿಸಲಾಗಿದೆ .ದೇಶದಲ್ಲಿ ಕುರುಬ ಸಮುದಾಯದ ಜನಸಂಖ್ಯೆ 12 ಕೋಟಿಯಷ್ಟಿದ್ದು, ಸಾಮಾಜಿಕ, ಆರ್ಥಿಕ, ರಾಜಕೀಯ ಪ್ರಾತಿನಿಧ್ಯೆ ಪಡೆಯುವ ಸಲುವಾಗಿ ಸಮುದಾಯದ ಸಂಘಟನೆಗೆ ಆದ್ಯತೆ ನೀಡಲಾಗಿದೆ ಎಂದರು

   ಇದೇ ತಿಂಗಳ 23 ರಂದು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಕರ್ನಾಟಕದ ರಾಜ್ಯ ಪದಾಧಿಕಾರಿ ಆಯ್ಕೆ ಮಾಡುತ್ತಿದ್ದು, ಇದೇ ರೀತಿಯಲ್ಲಿ ದೇಶಾದ್ಯಂತ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಸಂಘಟನೆ ಎಲ್ಲಾ ಹಿಂದುಳಿದ ವರ್ಗಗಳ ಸಮಸ್ಯೆಗಳ ಕುರಿತಂತೆ ಕಾಲಕಾಲಕ್ಕೆ ಚರ್ಚೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಹೆಚ್ ವಿಶ್ವನಾಥ್ ಮಾತನಾಡಿ, ಆಂಧ್ರಪ್ರದೇಶಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಮ್ಮ ಸಮುದಾಯಕ್ಕೆ ಐದು ಎಕರೆ ಜಮೀನು ನೀಡಿದ್ದು, ತಿರುಪತಿಯಲ್ಲೂ ಸಮುದಾಯ ಭವನ ನಿರ್ಮಿಸಲು ಭೂಮಿ ನೀಡುವ ಭರವಸೆ ಕೊಟ್ಟಿದ್ದಾರೆ ಎಂದರು. 

    ಪ್ರಪಂಚದಾದ್ಯಂತ ಕುರುಬ ಸಮುದಾಯವಿದ್ದು, ಗ್ರೀಸ್, ಲಂಡನ್ ನಲ್ಲಿ ಕುರುಬ ಸಮುದಾಯಕ್ಕೆ ಹೆಚ್ಚು ಮನ್ನಣೆ ಇದೆ. ವಿದೇಶಗಳಲ್ಲಿ ಕುರುಬರು ಕುರಿಗಾರಿಕೆ ಮೂಲಕ ಆರ್ಥಿಕತೆಯ‌ ಪ್ರಮುಖ ಭಾಗವಾಗಿದ್ದಾರೆ. ದೇಶದ ಹಲವು ಕಡೆ ಹಲವು ಹೆಸರುಗಳಿಂದ ಕುರುಬ ಸಮುದಾಯವನ್ನು ಕರೆಯುತ್ತಾರೆ. ಈಗ ಎಲ್ಲರೂ ಒಂದೇ ವೇದಿಕೆಗೆ ಬರಲು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನೆರವಾಗಲಿದೆ ಎಂದರು. 

    ಎಚ್.ಎಂ.ರೇವಣ್ಣ ಮಾತನಾಡಿ, ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ.ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ಬೇಡಿಕೆ ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕದಿಂದಲೂ ಕುರುಬ ಸಮುದಾಯವನ್ನು ಎಸ್.ಟಿ.ಪಟ್ಟಿಗೆ ಸೇರಿಸುವಂತೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link