ಬೆಂಗಳೂರು
ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ನಿರೀಕ್ಷೆಗೂ ಮೀರಿದ ಯಶಸ್ವಿಯಾಗಿದ್ದು 90 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರಕಟಿಸಿದರು.
ನಗರದಲ್ಲಿಂದ ಖಾಸಗಿ ಹೋಟೆಲ್ ನಲ್ಲಿ ಭಾರತೀಯ ಉದ್ಯಮಗಳ ಒಕ್ಕೂಟ ಆಯೋಜಿಸಿದ್ದ, ವಾರ್ಷಿಕ ಸದಸ್ಯರನ್ನುದ್ದೇಶಿಸಿ ಅವರು ಮಾತನಾಡಿ ಹುಬ್ಬಳ್ಳಿ ಸಮಾವೇಶ ಯಶಸ್ವಿಯಾಗಿರುವ ಹಿನ್ನಲೆಯಲ್ಲಿ ಬರುವ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಇನ್ವೆಸ್ಟ್ ಕರ್ನಾಟಕ ಬೃಹತ್ ಮೇಳ-ಸಮಾವೇಶ ಆಯೋಜಿಸಲಾಗುವುದು ಎಂದು ಹೇಳಿದರು.
ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ನಿರೀಕ್ಷೆಗೂ ಮೀರಿದ ಯಶಸ್ವಿಯಾಗಿದ್ದು, ಒಟ್ಟು 51 ಕಂಪನಿಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಯಿತು. 1500 ಕ್ಕೂ ಹೆಚ್ಚು ಉದ್ಯಮಿಗಳು ಆಗಮಿದ್ದರು. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಯು ಈ ಸಮಾವೇಶದ ಯಶಸ್ವಿಗೆ ಸಾಕ್ಷಿಯಾದವು. ಒಟ್ಟು ಸಮಾವೇಶದಲ್ಲಿ 51 ಕಂಪನಿಗಳೊಂದಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದ್ದು, 72 ಸಾವಿರ ಕೋಟಿ ಹೂಡಿಕೆ ಹರಿದು ಬರಲಿದೆ. ಇದರಿಂದ 90 ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದರು.
ದಾವೂಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆವು. ದೊಡ್ಡ ಪ್ರಮಾಣದ ಪ್ರತಿಕ್ರಿಯೆ ಹಲವು ಕೈಗಾರಿಕೋದ್ಯಮಿಗಳಿಂದ ಸಿಕ್ಕಿದೆ. ಮೂರೇ ದಿನಗಳಲ್ಲಿ 40ಕ್ಕೂ ಹೆಚ್ಚಿನ ದೊಡ್ಡ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿದೆವು. ಅವರು ಕರ್ನಾಟಕದಲ್ಲಿ ಹೂಡಿಕೆ ಮಾಡುವುದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಕೈಗಾರಿಕೆ ಸಲುವಾಗಿ ರೈತರಿಂದ ಭೂಮಿ ಖರೀದಿಗೆ ತಿಂಗಳಲ್ಲಿ ಒಪ್ಪಿಗೆ ನೀಡಲಾಗುವುದು. ಅಂತೆಯೇ 30 ದಿನಗಳೊಳಗೆ ಎನ್‌ಎ (ಕೃಷಿಯೇತರ ಭೂಮಿ) ಮಾಡಿಕೊಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಇದು ಕೈಗಾರಿಕೋದ್ಯಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಉತ್ತರ ಕರ್ನಾಟಕದಲ್ಲೂ ಕೈಗಾರಿಕೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಾಷ್ ಕಂಪೆನಿ ಕಾರ್ಯ ನಿರ್ವಾಹಕ ನಿರ್ದೇಶಕ ಸುಮಿತ್ರಾ ಭಟ್ಟಾಚಾರ್ಯ, ಅಮಾನ್ ಚೌಧರಿ, ದಾನಾ ಕ್ರಾಶ್ ಸೇರಿದಂತೆ ಪ್ರಮುಖರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ