ಹಿರಿಯೂರು :
ತಾಲ್ಲೂಕಿನ ಧರ್ಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐಸೋಲೇಷನ್ ವಾರ್ಡ್ ನಿರ್ಮಿಸಲಾಗಿದೆ ಎಂಬುದಾಗಿ ಕ್ಷೇತ್ರದ ಶಾಸಕರಾದ ಶ್ರೀಮತಿ ಕೆ.ಪೂರ್ಣಿಮಾ ಶ್ರೀನಿವಾಸ್ ರವರು ಹೇಳಿದ್ದಾರೆ.ತಾಲ್ಲೂಕಿನ ಧರ್ಮಪುರ ಹೋಬಳಿ ಕೇಂದ್ರವು ಹಿರಿಯೂರು ತಾಲ್ಲೂಕು ಕೇಂದ್ರದಿಂದ ಬಹಳ ದೂರ ಇರುವುದರಿಂದ ಈ ಭಾಗದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಧರ್ಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಿರ್ಮಿಸಲಾಗಿದೆ.
ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿರುವುದರಿಂದ ಕರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರದ ಸೂಚನೆಯಂತೆ ಮನೆಯಿಂದ ಹೊರಗೆ ಬಾರದೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








