ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇನ್ನೂ 2-3 ತಿಂಗಳು ಆರಂಭಿಸದೇ ಇರುವುದು ಉತ್ತಮ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಈಗಾಗಲೇ ಕೊರೊನಾ ಸಂದರ್ಭದಲ್ಲಿ ಅರ್ಧ ಶೈಕ್ಷಣಿಕ ವರ್ಷ ಮುಗಿದಿದೆ. ಶಿಕ್ಷಕರಿಗೆ ಸಿಗಬೇಕಾದ ಸೌಲಭ್ಯಗಳು ಸಿಗಬೇಕು. ವಿದ್ಯಾರ್ಥಿಗಳಿಗೆ ರಿಯಾಯಿತಿ ಕೊಟ್ಟು ಪಾಸ್ ಮಾಡಬೇಕು. ಪಾಸ್ ಮಾಡುವುದರಿಂದ ಏನೂ ಆಗುವುದಿಲ್ಲ. ಪೋಷಕರು, ಮಕ್ಕಳು ಆರೋಗ್ಯದ ದೃಷ್ಟಿಯಿಂದ ಇನ್ನೂ 2-3 ತಿಂಗಳು ಶಾಲೆ ಆರಂಭ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
