ಬೆಂಗಳೂರು
ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಸ್ವತಃ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಿಂದೆ ವಿರೋಧಿಸಿದ್ದರು.ಪರಿಸರ ಪ್ರೇಮಿಗಳು ವಿರೋಧಿಸಿದ್ದ ಉಕ್ಕಿನಸೇತುವೆ ನಿರ್ಮಾಣಕ್ಕೆ ದಿಢೀರ್ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಈ ಸಂಬಂಧ ಸದನದಲ್ಲಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಿಂದೆ ಕಾಂಗ್ರೆಸ್ ಸರ್ಕಾರದ ವೇಳೆ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲು ಹೊರಟಾಗ ಸ್ವತಃ ಕುಮಾರಸ್ವಾಮಿ ವಿರೋಧ ಮಾಡಿದ್ದರು ಆದರೆ ಇಂದು ಏಕಾಏಕಿ ನಿರ್ಣಯ ಕೈಗೊಂಡಿರುವುದು ಯಕ್ಷ ಪ್ರಶ್ನೆಯಾಗಿದೆ..? ಹಾಗಾಗಿ ತರಾತುರಿಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಬಾರದು ಎಂದು ಸರ್ಕಾರವನ್ನು ಆಗ್ರಹಿಸಿದರು.
ಯಾರಿಗೂ ಬೇಡವಾದ ಕೆಲಸವನ್ನೇ ಸರ್ಕಾರ ಮಾಡಲು ಹೊರಟಿರುವುದು ಸರಿಯಲ್ಲ, ಇದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಲಿದೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಸಾಧಕ ಬಾಧಕ ಕುರಿತು ವಿಧಾನಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತು.ಸಾರ್ವಜನಿಕರೇ ಆಕ್ಷೇಪ ವ್ಯೆಕ್ತಪಡಿಸಿದಾಗ ಜನರ ಬೆಂಬಲಕ್ಕೆ ನಿಲ್ಲುವುದು ವಿಪಕ್ಷಗಳ ಕರ್ತವ್ಯವೆಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ