ಶಿರಾ
ರಾಜ್ಯದಲ್ಲಿನ ರಾಜಕಾರಣ ಜಾತಿಯ ಆಧಾರದ ಮೇಲೆಯೇ ನಡೆಯುತ್ತಿರುವುದು ನಿಜಕ್ಕೂ ವಿರ್ಪಾಸದ ಸಂಗತಿಯಾಗಿದೆ. ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲೂ ಜಾತಿ ರಾಜಕಾರಣಕ್ಕೆ ಮತದಾರ ಬಲಿಯಾಗಬಾರದು ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಪಿ.ವಿ.ಲೋಕೇಶ್ ತಿಳಿಸಿದರು.
ನಗರದಲ್ಲಿ ಶನಿವಾರ ಸಿ.ಪಿ.ಐ. ಪಕ್ಷದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ್ ನಿಧನರಾಗಿದ್ದು ನಮಗೂ ಕೂಡ ನೋವು ತಂದಿದೆ. ಈ ಕ್ಷೇತ್ರದ ಮತದಾರರು ಅವರನ್ನು ಪೂರ್ಣಾವಧಿಗೆ ಚುನಾಯಿಸಿದ್ದರು. ಆದರೆ ದುರದೃಷ್ಟವಶಾತ್ ಅವರ ನಿಧನದಿಂದ ಉಪ ಚುನಾವಣೆ ಅನಿವಾರ್ಯವಾಗಿದೆ ಎಂದರು.
ಮೂರು ರಾಷ್ಟ್ರೀಯ ಪಕ್ಷಗಳು ಕೂಡ ಹಣ ಬಲ, ತೋಳ್ಬಲಗಳ ಮೇಲೆ ರಾಜಕಾರಣ ನಡೆಸುತ್ತಿವೆ. ಅಲ್ಲದೆ ಜಾತಿಯನ್ನು ಮುಂದು ಮಾಡಿಕೊಂಡು ರಾಜಕೀಯ ಷಡ್ಯಂತ್ರ ನಡೆಸುತ್ತಿವೆ. ಶಿರಾ ಕ್ಷೇತ್ರದಲ್ಲೂ ಕೂಡ ಇಂತಹುದೇ ರಾಜಕಾರಣ ಬೇರುಬಿಟ್ಟಿದೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದ್ದು ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದರು. ಜಿಲ್ಲಾ ಕಾರ್ಯಾಧ್ಯಕ್ಷ ಕಾಂತರಾಜು, ರಂಗನಾಥಪ್ಪ, ಬಸವರಾಜು, ನರಸಿಂಹಯ್ಯ, ರಾಮಣ್ಣ ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ