ಹೊನ್ನಾಳಿ
ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಜಗದ್ಗುರು ಚತುರಾಚಾರ್ಯರ ಅಡ್ಡಪಲ್ಲಕ್ಕಿ ಉತ್ಸವದ ಪ್ರಯುಕ್ತ ಗುರುವಾರ ರಾತ್ರಿ ಹಮ್ಮಿಕೊಂಡ ಸರ್ವಧರ್ಮ ಸಮ್ಮೇಳನದಲ್ಲಿ ಕಮ್ಮಾರಗಟ್ಟೆ ಗ್ರಾಮಸ್ಥರು ಬಾಳೇಹೊನ್ನೂರಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರಿಗೆ ಗ್ರಾಮಸ್ಥರು ಸ್ಮರಣಿಕೆ ನೀಡಿ, ಗೌರವ ಸಮರ್ಪಿಸಿ, ಆಶೀರ್ವಾದ ಪಡೆದುಕೊಂಡರು. ಬಸವಾಪಟ್ಟಣ ಗವಿಮಠ, ರಾಂಪುರ ಬೃಹನ್ಮಠದ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮೀಜಿ ಮತ್ತು ಹೊಟ್ಯಾಪುರ ಹಿರೇಮಠದ ಗಿರಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಇದ್ದರು.